ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿ ಎರಡೆರಡು ಬಾರಿ ಪ್ರಬಲ ಭೂಕಂಪ ಸಂಭವಿಸಿದ್ದು ಇದು ಸೂರ್ಯಗ್ರಹಣದ ಎಫೆಕ್ಟ್ ಎಂದು ಹೇಳಲಾಗುತ್ತಿದೆ.
ಮೊದಲ ಭೂಕಂಪ ಸಂಭವಿಸಿದ 15 ನಿಮಿಷಗಳಲ್ಲೇ ಮತ್ತೆ ಭೂಕಂಪ ಸಂಭವಿಸಿದೆ.
ರಿಕ್ಷರ್ ಮಾಪಕದಲ್ಲಿ ಮೊದಲ ಬಾರಿ ಭೂಕಂಪದ ತೀವ್ರತೆ 7.7, 2ನೇ ಬಾರಿಗೆ 6.4 ತೀವ್ರತೆ ದಾಖಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಇದರಿಂದ ಮಯನ್ಮಾರ್ ಗಡಿ ದೇಶವಾಗಿರುವ ಭಾರತದ ನವದೆಹಲಿ ಯಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 11.50ರ ಸುಮಾರಿಗೆ ಭೂಮಿಯ 10 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ ಕೆಲ ಕಟ್ಟಡಗಳು
ಉರುಳಿವೆ.
ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿದ ಎಫೆಕ್ಟ್ ಬ್ಯಾಂಕಾಕ್‌ಗೂ ತಟ್ಟಿದೆ. ಬ್ಯಾಂಕಾಕ್ ಹಾಗೂ ಥೈಲ್ಯಾಂಡ್‌ನಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ಕಟ್ಟಡಗಳು ಅಲುಗಾಡಿವೆ, ಕೆಲವಡೆ ಮುಗಿಲೆತ್ತರದ ಕಟ್ಟಗಳು ಧ್ವಂಸವಾದ ದೃಶ್ಯಗಳು ಸೆರೆಯಾಗಿವೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಸಾಮಾಜಿಕ ಜಾಲತಾಣದಲ್ಲಿ ಭೂಕಂಪದ ತೀವ್ರತೆ ಬಗ್ಗೆ ಮಾಹಿತಿ ನೀಡಿದೆ.
ಬ್ಯಾಂಕಾಕ್‌ನಲ್ಲಿ ಭೂಕಂಪದ ಅನುಭವವಾದ ನಂತರ ಕಟ್ಟಡದ ಮೇಲ್ಛಾವಣಿಯಲ್ಲಿದ್ದ ಟ್ಯಾಂಕ್‌ನಿಂದ ನೀರು ಕೆಳಗೆ ಬೀಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮ್ಯಾನ್ಮಾರ್ ಕೇಂದ್ರಬಿಂದು ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ನಿಂದ 10 ಕಿ.ಮೀ ದೂರ ವ್ಯಾಪ್ತಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು 43 ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ಮತ್ತು ವೈದ್ಯರು ತಿಳಿಸಿದ್ದಾರೆ. ಬಲವಾದ ಭೂಕಂಪದಿಂದ ನಗರವು ನಲುಗಿಹೋಗಿದೆ.
ಥಾಯ್ ರಾಜಧಾನಿಯ ಉತ್ತರದಲ್ಲಿರುವ ಕಟ್ಟಡವು ಕೆಲವೇ ಸೆಕೆಂಡುಗಳಲ್ಲಿ ಉರುಳಿಬಿದ್ದಿವೆ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಇಂದು ಮಧ್ಯಾಹ್ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಕಂಪನವು ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ಕೆಲವೇ ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಭೂಕಂಪ ಮತ್ತೆ ಸಂಭವಿಸಿದೆ, ಥಾಯ್ ಅಧಿಕಾರಿಗಳು ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ತಿಳಿಸಿದ್ದಾರೆ.
ಮ್ಯಾನ್ಮಾರ್ ರಾಜಧಾನಿ ನೇಪಿಡಾವ್‌ನಲ್ಲಿ ಕಟ್ಟಡಗಳಿಂದ ಛಾವಣಿಗಳು ಬಿದ್ದು, ರಸ್ತೆಗಳು ಕುಸಿದುಹೋದ ಬಗ್ಗೆ ವರದಿಯಾಗಿದೆ, ಇದು 20 ಲೇನ್‌ಗಳ ಅಗಲದ ಹೆದ್ದಾರಿಗಳನ್ನು ಹೊಂದಿರುವ ವಿಸ್ತಾರವಾದ ನಗರವಾಗಿದೆ. ಸಮವಸ್ತ್ರ ಧರಿಸಿದ ಸಿಬ್ಬಂದಿ ಹೊರಗೆ ಓಡಿಹೋದಾಗ ಸೀಲಿಂಗ್‌ನಿಂದ ತುಂಡುಗಳು ಬಿದ್ದಿದೆ, ಗೋಡೆಗಳು ಬಿರುಕು ಬಿಟ್ಟಿವೆ ಅವರಲ್ಲಿ ಕೆಲವರು ನಡುಗುತ್ತಾ ಕಣ್ಣೀರು ಸುರಿಸುತ್ತಿದ್ದಾರೆ.
ಭೂಕಂಪದ ನಂತರ ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ ಆದರೆ ಅವು ಉತ್ತರ ಥೈಲ್ಯಾಂಡ್‌ನ ಹತ್ತಿರದ ನಗರಗಳಲ್ಲಿ ಮತ್ತು ರಾಜಧಾನಿ ಬ್ಯಾಂಕಾಕ್‌ನಲ್ಲಿ ಭೀತಿಯನ್ನುಂಟುಮಾಡಿದೆ.
ಭೂಕಂಪವು ಬ್ಯಾಂಕಾಕ್‌ನಲ್ಲಿ ಕಟ್ಟಡಗಳಿಗೆ ಹಾನಿಯನ್ನುಂಟುಮಾಡಿದ್ದು, ನಗರದಲ್ಲಿ ಕೆಲವು ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಚೀನಾದ ನೈಋತ್ಯ ಯುನ್ನಾನ್ ಪ್ರಾಂತ್ಯದಲ್ಲಿಯೂ ರಿಕ್ಟರ್ ಮಾಪಕದಲ್ಲಿ 7.9 ತೀವ್ರತೆಯ ಕಂಪನ ಸಂಭವಿಸಿದೆ.