ಭಯೋತ್ಪಾದಕರು, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ಶಿಕ್ಷೆಯಾಗಲಿದೆ:ಮೋದಿ

ಪಾಟ್ನಾ: ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ ಭಯೋತ್ಪಾದಕರಿಗೆ ಮತ್ತು ಸಂಚು ರೂಪಿಸಿದವರಿಗೆ ಅವರ ಕಲ್ಪನೆಗೂ ಮೀರಿದ ಶಿಕ್ಷೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಮೋದಿ ಈ ರೀತಿ ಉಗ್ರರಿಗೆ ಎಚ್ಚರಿಕೆ ನೀಡಿದರು.

ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಮಾತು ಆರಂಭಿಸಿ ಉಗ್ರರಿಗೆ ಸರಿಯಾದ ಶಿಕ್ಷೆಯಾಗಲಿದೆ ಎಂದು ಹೇಳಿದರು.