ಶ್ರೀನಗರ: ಪಹಲ್ಗಾಮ್ ದಾಳಿಯ ನಂತರ ಉಗ್ರರನ್ನು ಮಟ್ಟ ಹಾಕುವ ಕಾರ್ಯಾಚರಣೆ ತೀವ್ರಗೊಂಡಿದ್ದು ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಲಷ್ಕರ್-ಎ-ತೈಬಾ ಟಾಪ್ ಕಮಾಂಡರ್‌ನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
ಅಲ್ತಾಫ್ ಲಲ್ಲಿ ಟಾಪ್ ಕಮಾಂಡರ್ ಆಗಿದ್ದು ಉಗ್ರ ಕೃತ್ಯಗಳಿಗೆ ಸಹಕಾರ ನೀಡುತ್ತಿದ್ದ. ಅರಣ್ಯದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ಬೆಳಗ್ಗೆ ಜಂಟಿ ಕಾರ್ಯಾಚರಣೆ ನಡೆದಿದ್ದು, ಈ ಎನ್‌ಕೌಂಟರ್‌ನಲ್ಲಿ ಅಲ್ತಾಫ್ ಲಲ್ಲಿ ಹತ್ಯೆಯಾಗಿ ದ್ದಾನೆ.
ಈ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.