ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿ ಬಿಜೆಪಿಯ ರಾಜಕೀಯ ಷಡ್ಯಂತ್ರ ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.
ಜನರ ಗಮನ ಬೇರೆಡೆಗೆ ಸೆಳೆಯಲು ಮಾಡುತ್ತಿರುವ ಕುತಂತ್ರ ಇದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಉಪ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ನಮ್ಮ ಸ್ಥೈರ್ಯ ಕುಗ್ಗಿಸಲು, ಸಿಬಿಐ ದಾಳಿ ಮಾಡಿಸಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ನಲ್ಲಿ ತಿಳಿಸಿದ್ದಾರೆ.