ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿದೆ.
ಸೋಮವಾರ ಬೆಳಗ್ಗೆ ಸಿಬಿಐ ಡಿ.ಕೆ. ಶಿವಕುಮಾರ್ ಮತ್ತು ಸಹೋದರ ಡಿ. ಕೆ. ಸುರೇಶ್ ಅವರ ನಿವಾಸ, ಕಚೇರಿ ಸೇರಿ 14 ಸ್ಥಳಗಳಲ್ಲಿ ದಾಳಿ ನಡೆಸಿತ್ತು.
74.93 ಕೋಟಿ ರೂ. ಅಕ್ರಮ ಆಸ್ತಿ ಗಳಿಸಿದ ಆರೋಪದಡಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಕುಟುಂಬದ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.
ದಾಳಿ ವೇಳೆ 57 ಲಕ್ಷ ರೂ ನಗದು ಹಾಗೂ ಆಸ್ತಿ ದಾಖಲೆಗಳು, ಬ್ಯಾಂಕ್ ಗೆ ಸಂಬಂಧಿಸಿದ ಮಾಹಿತಿಗಳು, ಕಂಪ್ಯೂಟರ್ ಹಾರ್ಡ್ ಡಿಸ್ಕ್ ಅನ್ನು ಸಿಬಿಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.