ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ನಗರದ ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಶ್ರೀನಿವಾಸ್ ಅಲಿಯಾಸ್ ಶೀನಾ (50), ಮೈಸೂರಿನ ಭಾರತ್ ನಗರದ ಲಿಯಾಕುತ್ ವುಲ್ಲಾ(28), ವಾಸೀಂ ಅಕ್ರಮ್(28) ಹಾಗೂ ನವೀದ್ ಪಾಷಾ(28) ಬಂಧಿತ ಆರೋಪಿಗಳು.
ಬಂಧಿತರಿಂದ 8 ಕೆಜಿ 650ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಆಲನಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯ ನಂದಿನಿ ಬಡಾವಣೆಯ 2ನೇ ಕ್ರಾಸ್ ನಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಪೆÇಲೀಸರರೀ ನಾಲ್ವರರನ್ನು ಬಂಧಿಸಿದ್ದಾರೆ.
ಶ್ರೀನಿವಾಸ ಮತ್ತು ನವೀದ್ ಪಾಷಾ ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವುದು ಪೊಲೀಸರ ವಿಚಾರಣೆ ವೇಳೆ ತಿಳಿದು ಬಂದಿದೆ.
ವಾಸೀಂ ಅಕ್ರಮ್ ಈ ಹಿಂದೆ ದ್ವಿಚಕ್ರವಾಹನಗಳ ಕಳುವು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆಂದು ಪೆÇಲೀಸರು ತಿಳಿಸಿದ್ದಾರೆ.
ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ವಿ.ಮರಿಯಪ್ಪ ನೇತೃತ್ವದಲ್ಲಿ ಪೆÇಲೀಸ್ ಇನ್ಸಪೆಕ್ಟರ್ ಲೋಲಾಕ್ಷಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.