ಜಂಬೂಸವಾರಿ ಚಾಮುಂಡೇಶ್ವರಿ ವಿಗ್ರಹ ಚಾಮುಂಡಿ ಬೆಟ್ಟಕ್ಕೆ

ಮೈಸೂರು: ಜಂಬೂಸವಾರಿ ಉತ್ಸವ ಮೂರ್ತಿ ಚಾಮುಂಡೇಶ್ವರಿ ವಿಗ್ರಹವನ್ನು ಬುಧವಾರ ಚಾಮುಂಡಿ ಬೆಟ್ಟಕ್ಕೆ ಕೊಂಡೊಯ್ಯಲಾಯಿತು.
ಮೈಸೂರು ಅರಮನೆಯಲ್ಲಿದ್ದ ವಿಗ್ರವನ್ನು ಶುಚಿಗೊಳಿಸಿ ಪೂಜೆ ಸಲ್ಲಿಸಿ ನಂತರ ಚಾಮುಂಡಿ ಬೆಟ್ಟಕ್ಕೆ ತೆಗೆದುಕೊಂಡು ಹೋಗಲಾಯಿತು.
ಉತ್ಸವ ಮೂರ್ತಿಯನ್ನು ಚಾಮುಂಡಿ ಬೆಟ್ಟದಲ್ಲಿ ಪ್ರತಿಷ್ಠಾಪಿಸಿ ನವರಾತ್ರಿ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.
ಜಂಬೂ ಸವಾರಿ ದಿನ ಮತ್ತೆ ಅರಮನೆಗೆ ಉತ್ಸವ ಮೂರ್ತಿಯನ್ನು ತಂದು ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಗುತ್ತದೆ.