ಶಾಲಾಕಾಲೇಜು ಆರಂಭಕ್ಕೆ ಆತುರ ತೋರುವುದಿಲ್ಲ -ಸಚಿವ ಶ್ರೀರಾಮಲು

ಮೈಸೂರು: ಶಾಲಾಕಾಲೇಜುಗಳ ಆರಂಭಕ್ಕೆ ಸರ್ಕಾರ ಆತುರ ತೋರುವುದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ಸಚಿವ ಶ್ರೀರಾಮಲು ಅವರು ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧೀಗಳೊಂದಿಗೆ ಮಾತನಾಡಿದರು.
ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ಸರ್ಕಾರ ಆತುರತೆ ತೋರುವುದಿಲ್ಲ. ಶಾಲಾ ಕಾಲೇಜು ಆರಂಭಿಸುವ ವಿಚಾರದಲ್ಲಿ ನನಗೆ ವಿದ್ಯಾರ್ಥಿಗಳು ಹಾಗೂ ಪೆÇೀಷಕರ ಹಿತ ಮುಖ್ಯ ಎಂದರು.
ಈ ಸಂಬಂಧ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ. ಒಂದು ವಾರದೊಳಗೆ ವರದಿ ನೀಡುವಂತೆ ತಜ್ಞರ ಸಮಿತಿಗೆ ಸೂಚಿಸಲಾಗಿದೆ. ತಜ್ಞರ ಸಮಿತಿ ನೀಡುವ ವರದಿ ಅಧರಿಸಿ ಶಾಲಾ ಕಾಲೇಜುಗಳ ಆರಂಭದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಶಾಲೆ ಆರಂಭಿಸಬೇಕೋ ಅಥವಾ ಬೇಡವೋ ಅನ್ನುವ ಬಗ್ಗೆ ಒಂದು ವಾರದಲ್ಲಿ ಆರೋಗ್ಯ ಇಲಾಖೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಎಲ್ಲಾ ಕ್ಷೇತ್ರದ ತಜ್ಞರ ಅಭಿಪ್ರಾಯ ಪಡೆಯಲಾಗಿದೆ. ಮಕ್ಕಳ ಸುರಕ್ಷತೆ ನಮಗೆ ಮುಖ್ಯ ಎಂದು ಶ್ರೀರಾಮಲು ಹೇಳಿದರು.
ಪೆÇೀಷಕರು ಮಕ್ಕಳ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗುವುದು. ಶಾಲೆ ಆರಂಭಕ್ಕೂ ಮುನ್ನ ಮಕ್ಕಳು ಪೆÇೀಷಕರಿಗೆ ಕೌನ್ಸಿಲಿಂಗ್ ಮಾಡಲಾಗುವುದು ಎಂದವರು ತಿಳಿಸಿದರು.
ಭಾರತದ 17 ರಾಜ್ಯಗಳ 60 ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ ಎಂದು ಗುರುತಿಸಲಾಗಿದೆ. ಈ ಪೈಕಿ ಬೆಂಗಳೂರು, ಮೈಸೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚು ಇವೆ. ಸಾವಿನ ಸಂಖ್ಯೆ ಕೂಡ ಮೈಸೂರಲ್ಲಿ ಹೆಚ್ಚುತ್ತಿದೆ. ಹಾಗಾಗಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದರು.