ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ (74) ಗುರುವಾರ ರಾತ್ರಿ ನಿಧನರಾಗಿದ್ದಾರೆ.
ರಾಮ್ ವಿಲಾಸ್ ಪಾಸ್ವಾನ್ ಅವರು ಇತ್ತೀಚೆಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.
ನಮ್ಮ ತಂದೆ ನಿಧನರಾಗಿದ್ದಾರೆ ಎಂದು ರಾಮ್ ವಿಲಾಸ್ ಪಾಸ್ವಾನ್ ರ ಪುತ್ರ ಚಿರಾಗ್ ಪಾಸ್ವಾನ್ ಟ್ವೀಟ್ ಮಾಡಿದ್ದಾರೆ.
ಪಾಸ್ವಾನ್ ಕಳೆದ ಐದು ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.
ದಲಿತ ನಾಯಕರಾಗಿದ್ದ ಪಾಸ್ವಾನ್ ಲೋಕ್ ಜನಶಕ್ತಿ ಪಾರ್ಟಿ (ಎಲ್ಜೆಪಿ) ಸಂಸ್ಥಾಪಕರು.
ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪಾಸ್ವಾನ್ ಸಾವಿಗೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.