ನವದೆಹಲಿ: ಕೇಂದ್ರ ಸರಕಾರಿ ನೌಕರರಿಗೆ ಬಡ್ಡಿ ರಹಿತ ಹಬ್ಬದ ಮುಂಗಡ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು.
ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ 10 ಸಾವಿರ ರೂ. ಬಡ್ಡಿ ರಹಿತ ಹಬ್ಬದ ಮುಂಗಡ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ ಎಂದವರು ತಿಳಿಸಿದರು.
ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಯೋಜನೆಯನ್ನು 6ನೇ ವೇತನ ಆಯೋಗದಿಂದ ನಿಲ್ಲಿಸಲಾಗಿದೆ. ಆದರೆ ಈ ಬಾರಿ ವಿಶೇಷವಾಗಿ ಕೇಂದ್ರ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಬಡ್ಡಿ ರಹಿತ ಮುಂಗಡವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ರುಪೇ ಕಾರ್ಡ್ ರೂಪದಲ್ಲಿ 10 ಸಾವಿರ ರೂಪಾಯಿ ಮುಂಗಡ ದೊರೆಯಲಿದ್ದು, ಮಾ. 31, 2021 ವರೆಗೂ ಇದನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಈ ಹಣವನ್ನು 10 ಕಂತುಗಳಲ್ಲಿ ಮರುಪಾವತಿ ಮಾಡಬಹುದಾಗಿದೆ ಎಂದು ಅವರು ಹೇಳಿದರು.
ಇನ್ನು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನೀಡಲಾಗುವ ಎಲ್ ಟಿಸಿಯ ಬದಲಾಗಿ ಈ ಬಾರಿ ನಗದು ವೋಚರ್ ಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಬಾರಿ ಕೋವಿಡ್-19 ಕಾರಣದಿಂದಾಗಿ ಪ್ರಯಾಣ ಸೂಕ್ತವಲ್ಲದ ಹಿನ್ನೆಲೆಯಲ್ಲಿ ಎಲ್ ಟಿಸಿ ಬದಲಿಗೆ ನಗದು ವೋಚರ್ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.