ಬೆಂಗಳೂರು: ನಾನು ಕೇಳಿದ ಖಾತೆಯನ್ನೇ ಮುಖ್ಯಮಂತ್ರಿಗಳು ನನಗೆ ನೀಡಿದ್ದಾರೆ ಎಂದು ಸಚಿವ ಶ್ರೀರಾಮಲು ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಶ್ರೀರಾಮಲು ಅವರು ಸಿಎಂರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಈ ಹಿಂದೆ ನನಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೆ. ಅದರಂತೆ ಸಿಎಂ ಆ ಖಾತೆಯನ್ನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗಿರುವಂತೆ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದರು.
ಕೊರೊನಾ ಕಾಲದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಒಬ್ಬರ ಬಳಿ ಇರೋದು ಉತ್ತಮ. ಹಾಗಾಗಿ ಆರೋಗ್ಯ ಇಲಾಖೆ ಖಾತೆಯನ್ನ ಸೋದರ ಸುಧಾಕರ್ ಅವರಿಗೆ ನೀಡಲಾಗಿದೆ. ಸುಧಾಕರ್ ವೈದ್ಯರಾಗಿದ್ದು, ಆರೋಗ್ಯ ಇಲಾಖೆಯನ್ನ ಉತ್ತಮವಾಗಿ ನಿರ್ವಹಿಸಲಿದ್ದಾರೆಂದು ಶ್ರೀರಾಮಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಮಾತನಾಡಿ, ಬಿಹಾರ ಮತ್ತು ಉಪ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಕೆಲ ತಾಂತ್ರಿಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಖಾತೆಗಳ ಬದಲಾವಣೆಯಾಗಿದೆ ಎಂದರು.
ಖಾತೆ ಬದಲಾವಣೆಯಿಂದ ಪಕ್ಷದಲ್ಲಿ ಉಂಟಾಗಿದ್ದ ಅಸಮಾಧಾನವನ್ನ ಶಮನಗೊಳಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.