ಉಪ ಚುನಾವಣೆ: ಆರ್.ಆರ್.ನಗರಕ್ಕೆ ಮುನಿರತ್ನ, ಶಿರಾಕ್ಕೆ ರಾಜೇಶ್ ಗೌಡ

ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.
ರಾಜರಾಜೇಶ್ವರಿ ನಗರಕ್ಕೆ ಬಿಜೆಪಿ ಮುನಿರತ್ನ ಹಾಗೂ ಶಿರಾ ಕ್ಷೇತ್ರಕ್ಕೆ ಮಾಜಿ ಸಂಸದ ಸಿಪಿ ಮೂಡಲಗಿರಿಯಪ್ಪ ಅವರ ಪುತ್ರ ಡಾ. ರಾಜೇಶ್ ಗೌಡ ಅವರ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ.
ನ. 3ರಂದು ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಮಂಗಳವಾರ ಸಂಜೆ ಘೋಷಣೆ ಮಾಡಿತು.