ಮೈಸೂರು, ಅ. 14- ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಅ. 14ರಿಂದ 18ರವರೆಗೆ ಸಾರ್ವಜನಿಕರಿಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶವಿರುವುದಿಲ್ಲ ಹಾಗೂ ಅ. 23 ರಿಂದ ನ. 1ರ ವರೆಗೂ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ.
ಅ. 17ರಂದು ದಸರಾ ಉದ್ಘಾಟನೆಗೆ ಆಹ್ವಾನಿತರಿಗೆ ಮಾತ್ರ ಚಾಮುಂಡಿಬೆಟ್ಟಕ್ಕೆ ಪ್ರವೇಶ ಕಲ್ಪಿಸಲಾಗಿದೆ.
ಅ. 15ರಿಂದ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ವತಿಯಿಂದ ಪೂರ್ವ ಸಿದ್ಧತೆ ನಡೆಸಲಾಗುತ್ತಿದ್ದು, ಪೂರ್ವ ಸಿದ್ಧತೆ ವೇಳೆ, ಸಿದ್ಧತಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮಸ್ಥರು ಹೊರತುಪಡಿಸಿ, ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.