ನ. 14ರಿಂದ ಸಹಕಾರ ಸಪ್ತಾಹ: ಸರಳ ಆಚರಣೆ -ಸಹಕಾರ ಸಚಿವ ಎಸ್.ಟಿ.ಎಸ್.

ಬೆಂಗಳೂರು: 67ನೇ ಅಖಿಲ ಭಾರತ ಸಹಕಾರ ಸಪ್ತಾಹ ನ. 14ರಿಂದ 20ರ ವರೆಗೆ ರಾಜ್ಯದಾದ್ಯಂತ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರು ತಿಳಿಸಿದರು.
ನಗರದಲ್ಲಿ ಬುಧವಾರ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನ. 14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಉದ್ಘಟಿಸಲಿದ್ದಾರೆ. ವಿವಿಧ ಸಹಕಾರ ಮಹಾಮಂಡಳಗಳು. ರಾಜ್ಯದ ಎಲ್ಲಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಸಹಕಾರ ಸಪ್ತಾಹವನ್ನು ಸರಳವಾಗಿ ಆಚರಿಸಲಾಗುವುದೆಂದರು.
ಕ್ರಮವಾಗಿ ಮಂಗಳೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಳಗಾವಿ, ಹೊಸಪೇಟೆ ಮತ್ತು ಸಮಾರೋಪ ಸಮಾರಂಭವನ್ನು ವಿಜಾಪುರದಲ್ಲಿ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಶಾಸಕ ಜಿ. ಟಿ. ದೇವೇಗೌಡ, ಸಹಕಾರ ಇಲಾಖಾ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಸಹಕಾರ ಸಂಘಗಳ ನಿಬಂಧಕ ಎಸ್ ಜಿಯಾವುಲ್ಲಾ, ಮಾರಾಟ ಸಹಕಾರ ಮಹಾಮಂಡಳದ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಸೌಹಾರ್ಧ ಸಹಕಾರಿ ಅಧ್ಯಕ್ಷ ಬಿ. ಎಚ್. ಕೃಷ್ಣಾರೆಡ್ಡಿ ಸೇರಿದಂತೆ ಸಹಕಾರಿ ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.