ಪೆÇಲೀಸ್ ಬಂದೋಬಸ್ತ್ ನಲ್ಲಿ ಮಹಿಷ ದಸರಾ

ಮೈಸೂರು: ಪೆÇಲೀಸರ ಬಿಗಿ ಬಂದೋಬಸ್ತ್ ನಲ್ಲಿ ನಗರದಲ್ಲಿ ಗುರುವಾರ ಮಹಿಷ ದಸರಾ ಆಚರಿಸಲಾಯಿತು.
ನಗರದ ಅಶೋಕಪುರಂನ ಅಂಬೇಡ್ಕರ್ ಪಾರ್ಕ್ ನಲ್ಲಿ ಮಹಿಷನ ಭಾವಚಿತ್ರಕ್ಕೆ ಆಚರಣಾ ಸಮಿತಿ ಪದಾಧಿಕಾರಿಗಳು ಪುಷ್ಪಾರ್ಚನೆ ಮಾಡಿದರು.
ಮಾಜಿ ಮೇಯರ್ ಪುರುಷೋತ್ತಮ್, ಜ್ಞಾನಪ್ರಕಾಶ ಸ್ವಾಮೀಜಿ, ಸಿದ್ದರಾಮು, ಪೆÇ್ರ.ಮಹೇಶ್ ಚಂದ್ರಗುರು ಸೇರಿದಂತೆ ಹಲವರು ಭಾಗಿಯಾಗಿದ್ದರು.
ಪೆÇಲೀಸರು ಯಾವುದೇ ಮೆರವಣಿಗೆ, ವೇದಿಕೆ ಕಾರ್ಯಕ್ರಮಕ್ಕೆ ಅನುಮತಿ ನೀಡಿರಲಿಲ್ಲ.
ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಜಿಲ್ಲಾಡಳಿತ ಅವಕಾಶ ನೀಡದ ಹಿನ್ನೆಲೆಯಲ್ಲಿ ಅಶೋಕಪುರಂನಲ್ಲಿರುವ ಅಂಬೇಡ್ಕರ್ ಉದ್ಯಾನವನದಲ್ಲಿ ಮಹಿಷ ದಸರಾ ಆಚರಣೆ ಮಾಡಲಾಯಿತು.