ಬೆಂಗಳೂರು: ಕೇಂದ್ರದಿಂದ ಸಾಲ ಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೇಂದ್ರದಿಂದ 12,407 ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರಕಾರ ಅರ್ಹತೆ ಹೊಂದಿದೆ ಎಂದು ಜಿಎಸ್‍ಟಿ ಮಂಡಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೇಂದ್ರದಿಂದ ಪಡೆದ ಸಾಲಕ್ಕೆ ಭವಿಷ್ಯದಲ್ಲಿ ಸೆಸ್ ಆದಾಯದಿಂದ ಪೂರ್ತಿ ಅಸಲು ಮತ್ತು ಬಡ್ಡಿಯನ್ನು ಭರಿಸಲಾಗುವುದು. ಇದರಿಂದಾಗಿ ರಾಜ್ಯದ ಆಯವ್ಯಯ ಸಂಪನ್ಮೂಲಗಳಿಂದ ಅಸಲು ಮತ್ತು ಬಡ್ಡಿ ಪಾವತಿಸಬೇಕಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಮತ್ತು ಆರ್ಥಿಕ ಪುನಶ್ಚೇತನಕ್ಕಾಗಿ ಹಣಕಾಸು ನೆರವು ಪಡೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.