ಬೆಂಗಳೂರು: ಕೋವಿಡ್ -19 ಪರೀಕ್ಷೆಗೆ ಸರಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವ ಲ್ಯಾಬ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್-19 ಪರೀಕ್ಷೆಗೆ ನಿಗದಿಪಡಿಸಲಾಗಿದ್ದ ದರಗಳನ್ನು ತಾಂತ್ರಿಕ ಸಲಹಾ ಸಮಿತಿ ಮರುಪರಿಶೀಲಿಸಿದ್ದು, ಪರಿಷ್ಕೃತ ದರಪಟ್ಟಿಯನ್ನು ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. ಸರ್ಕಾರ ನಿಗದಿ ಮಾಡಿರುವ ಗರಿಷ್ಠ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವ ಲ್ಯಾಬ್ ಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.