ಬೆಂಗಳೂರು: ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ.
ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಹರೀಶ್ ದ್ವಿವೇದಿ, ಸಹ ಉಸ್ತುವಾರಿಗಳಾದ ಡಾ.ಕಾಸಮ್ ವೆಂಕಟೇಶ್ವರಲು ಅವರ ನೇತೃತ್ವದಲ್ಲಿ ರಾಜ್ಯ ಪ್ರಮುಖರ ಸಭೆ ಹಮ್ಮಿಕೊಳ್ಳಲಾಯಿತು.
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಹಾಗೂ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಮುಂದಿನ ಕಾರ್ಯಯೋಜನೆ, ಸಂಘಟನೆಯನ್ನು ಬೂತ್ ಮಟ್ಟದಲ್ಲಿ ಮತ್ತಷ್ಟು ಸದೃಢಗೊಳಿಸುವುದು ಮತ್ತು ಕಾರ್ಯಕರ್ತರನ್ನು ಸಕ್ರಿಯವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಹಿರಿಯ ನಾಯಕರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

