ಚಾಮುಂಡಿಬೆಟ್ಟ ಅಭಿವೃದ್ಧಿಗೆ ಹಣ ಬಿಡುಗಡೆ -ಸಿಎಂ ಬಿಎಸ್ ವೈ

ಮೈಸೂರು: ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದರು.
ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಶನಿವಾರ ಚಾಮುಂಡಿಬೆಟ್ಟದಲ್ಲಿ ಡಾ. ಸಿ.ಎನ್ ಮಂಜುನಾಥ್ ಉದ್ಘಾಟಿಸಿದ ನಂತರ ಸಿಎಂ ಬಿಎಸ್ ವೈ ಮಾತನಾಡಿದರು.
ಚಾಮುಂಡಿ ಬೆಟ್ಟ ಅಭಿವೃದ್ಧಿಗೆ 7.5 ಕೋಟಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದವರು ಹೇಳಿ, ದೇವಿಕೆರೆ ಹಾಗೂ ಮೆಟ್ಟಿಲುಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿರುವುದಾಗಿ ಬಿಎಸ್ ವೈ ತಿಳಿಸಿದರು.
ಚಾಮುಂಡಿ ಬೆಟ್ಟ್ ಮತ್ತು ಚಾಮುಂಡೇಶ್ವರಿ ದೇವಾಲಯದ ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.