ಮೈಸೂರು ನ 28: ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯ ಬೀಗ ಮುರಿದು ಚಿನ್ನಾಭರಣ ಮತ್ತು ಬೆಳ್ಳಿ ಪದಾರ್ಥಗಳು ಕಳುವಾಗಿರುವ ಸಂಬಂಧ ಲಕ್ಷ್ಮೀಪುರಂ ಠಾಣೆಯಲ್ಲಿ ಕನ್ನ ಕಳುವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆ ಸಂಬಂಧ ಲಕ್ಷ್ಮೀಪುರಂ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ರೂ. 6,50,000 ಮೌಲ್ಯದ 50 ಗ್ರಾಂ ಚಿನ್ನಾಭರಣ ಮತ್ತು 265 ಗ್ರಾಂ ಬೆಳ್ಳಿ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿ ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ಕೆ.ಎಸ್. ಸುಂದರ್ ರಾಜ್ ಹಾಗೂ ಕೃಷ್ಣರಾಜ ವಿಭಾಗದ ಎಸಿಪಿ ಪ್ರಕಾಶ್ ಕೆ.ಸಿ. ಅವರ ಮಾರ್ಗದರ್ಶನದಲ್ಲಿ ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿಶಂಕರ್ ಬಿ.ಎಸ್., ಪಿಎಸ್ಐಗಳಾದ ಲಕ್ಷಪ್ಪ ಹೆಚ್. ಕುಕ್ಕಡಿ, ಶೇಖ್ ಫಿರೋಜ್, ಎಎಸ್ಐ ವಿಜಯರಾಘವ, ಸಿಬ್ಬಂದಿಗಳಾದ ಮಧುಸೂಧನ್, ಕುಮಾರ್, ಅನಿಲ್, ರಾಮಯ್ಯ, ಸುಜಾತ, ಬಸವರಾಜು, ಚಂದ್ರಶೇಖರ್ ಅವರು ಮಾಡಿದ್ದಾರೆ.
ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರು ಪ್ರಶಂಸಿಸಿದ್ದಾರೆ.

