ಮೈಸೂರು: ಮೈಸೂರು ದಸರಾ ವಿಶೇಷ ಆಕರ್ಷಣೆ ಜಂಬೂ ಸವಾರಿ.
ಜಂಬೂಸವಾರಿ ದಿನ ಚಿನ್ನದ ಅಂಬಾರಿಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಮೆರವಣಿಗೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಭಾನುವಾರ ಆನೆ ಅಭಿಮನ್ಯುವಿಗೆ ಅಂಬಾರಿ ಹೊರುವ ತಾಲೀಮು ನಡೆಸಲಾಯಿತು.
ಮರದ ಅಂಬಾರಿಯ ಜೊತೆಗೆ ಮರಳಿನ ಮೂಟೆಯನ್ನು ಹೊರೆಸಿ ಅರಮನೆ ಆವರಣದಲ್ಲಿ ತಾಲೀಮು ನಡೆಸಲಾಯಿತು ಎಂದು ಆನೆ ವೈದ್ಯ ಡಾ. ನಾಗರಾಜು ತಿಳಿಸಿದ್ದಾರೆ.
ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಅ. 26ರಂದು ನಡೆಯಲಿದ್ದು, ಇದಕ್ಕಾಗಿ ಅರಮನೆ ಆವರಣದಲ್ಲಿ ಅಭಿಮನ್ಯು ಆನೆಗೆ ಮರದ ಅಂಬಾರಿ ಹೊರುವ ತಾಲೀಮು ನಡೆಸಲಾಯಿತು.
ಅಭಿಮನ್ಯು ಆನೆ 750 ಕೆ. ಜಿ. ತೂಕದ ಚಿನ್ನದ ಅಂಬಾರಿ ಹೊರಲಿರುವ ಹಿನ್ನೆಲೆಯಲ್ಲಿ ಮರದ ಅಂಬಾರಿ ಕಟ್ಟಿ ತಾಲೀಮು ನಡೆಸಲಾಯಿತು.