ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಕೋವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಎಸ್. ಸುರೇಶ್ ಕುಮಾರ್ ಗುಣಮುಖರಾಗಿ, ಶನಿವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸಚಿವ ಸುರೇಶ್ ಕುಮಾರ್ ಅವರಿಗೆ ಅ. 5ರಂದು ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಹೋಮ್ ಐಸೋಲೇಶನ್ ನಲ್ಲಿದ್ದ ಅವರು ಅ. 10ರಂದು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದರು.
ನನಗೆ ಇನ್ನೂ ಎರಡು ವಾರಗಳ ಕಾಲ ಮನೆಯಿಂದ ಹೋಗಬಾರದು ಎಂದು ವೈದ್ಯರು ಸೂಚಿಸಿದ್ದಾರೆಂದು ಸುರೇಶ್ ಕುಮಾರ್ ಅವರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.