ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಬಿ.ಎಸ್.ವೈ ವೈಮಾನಿಕ ಸಮೀಕ್ಷೆ

ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಅ. 21ರಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಪ್ರವಾಹದಿಂದ ಜನ ಜಾನುವಾರುಗಳು ತೊಂದರೆಯಲ್ಲಿ ಸಿಲುಕಿದ್ದು, ಈ ಜಿಲ್ಲೆಗಳಲ್ಲಿ ಅ. 21ರಂದು ಸಿಎಂ ಬಿ.ಎಸ್.ವೈ ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ.
ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.