ಬೆಂಗಳೂರು: ನಮ್ಮ ಪಕ್ಷದ ಸಿದ್ಧಾಂತ ಆಧರಿಸಿ ಮತ ಕೇಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ನಗರದಲ್ಲಿ ಡಿಕೆಶಿವಕುಮಾರ್ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಪಕ್ಷದ ಸಿದ್ಧಾಂತ, ಅಭ್ಯರ್ಥಿ ಆಧರಿಸಿ ಮತ ಕೇಳುತ್ತೇವೆ. ಬೇರೆ ಪಕ್ಷಗಳು ಏನು ಮಾಡುತ್ತಿವೆ ಎಂಬುದು ನಮಗೆ ಬೇಕಾಗಿಲ್ಲ ಎಂದು ಡಿಕೆಶಿ ಹೇಳಿದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನ ಪಡೆಯಲಿದೆ ಎಂಬ ವಿಜಯೇಂದ್ರ ಅವರ ಹೇಳಿಕೆಗೆ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿ, ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಅವರಿಗೆ ಶುಭ ಕೋರುತ್ತೇನೆ ಎಂದರು.
ಯಾರು ಯಾರ ಜತೆಯಾದರೂ ನೆಂಟಸ್ಥನ, ಸಂಬಂಧ ಬೆಳೆಸಲಿ. ಯಾವುದೇ ಮೈತ್ರಿ ಬೇಕಾದರೂ ಮಾಡಿಕೊಳ್ಳಲಿ. ನಾವು ಅದರ ಬಗ್ಗೆ ಚಿಂತಿಸುವುದಿಲ್ಲ. ನಮ್ಮ ಪಕ್ಷದ ಸಿದ್ಧಾಂತ ಮುಂದಿಟ್ಟು ಅಭ್ಯರ್ಥಿಗೆ ಮತ ಕೇಳುತ್ತೇವೆ ಎಂದರು.