ಮೈಸೂರು: ಇಡಬ್ಲ್ಯೂಎಸ್ ರಿಯಾಯಿತಿಯನ್ನು ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರದ ಬಳಿ ಚರ್ಚಿಸುತ್ತೇವೆ ಎಂದು ಶಾಸಕ ಎಸ್.ಎ. ರಾಮದಾಸ್ ಅವರು ಹೇಳಿದರು.
ನಗರದ ಹೊಯ್ಸಳ ಕರ್ನಾಟಕ ಸಂಘದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರ ದೃಢೀಕರಣ ಪತ್ರ ವಿತರಣಾ ಸಮಾರಂಭದಲ್ಲಿ ಶಾಸಕ ಎಸ್.ಎ. ರಾಮದಾಸ್ ಅವರು ಪಾಲ್ಗೊಂಡು ಮಾತನಾಡಿದರು.
ಬ್ರಾಹ್ಮಣ ಸಮಾಜ ಸರ್ಕಾರದಿಂದ ಬರುವ ಆದಷ್ಟು ಸೌಕರ್ಯಗಳನ್ನು ನಾವು ಬಳಸಿಕೊಳ್ಳಬೇಕಾಗಿದೆ. ಉದ್ಯೋಗ, ಶಿಕ್ಷಣಕ್ಕೆ ಇಡಬ್ಲ್ಯೂಎಸ್ ಪತ್ರ ಬ್ರಾಹ್ಮಣ ಸಮಾಜಕ್ಕೆ ಬಹು ಮುಖ್ಯವಾಗಿದೆ ಈ ನಿಟ್ಟಿನಲ್ಲಿ ನವೆಂಬರ್ ಅಂತ್ಯದೊಳಗೆ ಇಡಬ್ಲ್ಯೂಎಸ್ ರಿಯಾಯಿತಿಯನ್ನು ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರದ ಬಳಿ ಚರ್ಚಿಸುತ್ತೇವೆ ಎಂದು ಅವರು ತಿಳಿಸಿದರು.
ಆಚಾರ್ಯತ್ರಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಮೂಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ಎಂ.ಆರ್.ಬಾಲಕೃಷ್ಣ, ವೇ.ಬ್ರ.ಭಾನುಪ್ರಕಾಶ್ ಶರ್ಮ, ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಪ್ರಕಾಶ್, ನಗರ ಭಾಜಪದ ಅಧ್ಯಕ್ಷ ಶ್ರೀವತ್ಸ, ನಗರಪಾಲಿಕಾ ಸದಸ್ಯ ರಾಮಪ್ರಸಾದ್ ಸೇರಿದಂತರ ಮತ್ತಿತರರು ಉಪಸ್ಥಿತರಿದ್ದರು.