ಮೈಸೂರು, ಅ. 19:-ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಸಮಾರಂಭವು ಇಂದು ವರ್ಚುವಲ್ ಕಾರ್ಯಕ್ರಮದ ಮೂಲಕ ಮೈಸೂರು ವಿವಿಯ ಕ್ರಾಫರ್ಡ್ ಭವನದಲ್ಲಿ ನಡೆಯಿತು.
29,018 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಪ್ರದಾನ ಮಾಡಲಾಗಿದೆ. ಮೈಸೂರು ವಿವಿಯಲ್ಲಿ ಪುರುಷರೇ ಮೇಲುಗೈ ಸಾಧಿಸಿದ್ದು, 18,344 (ಶೇ.63.21) ವಿದ್ಯಾರ್ಥಿಗಳು, 10,674 (ಶೇ.36.78) ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಮಾಡಲಾಗಿದೆ.
ಅಗ್ರಿ ಬಿಸನೆಸ್ ವಿಭಾಗದಲ್ಲಿ ಮನೋಜ್ ರಂಜನ್ ಅವರಿಗೆ ಡಿಲಿಟ್ ನೀಡಿ ಗೌರವಿಸಲಾಗಿದೆ. 654 ವಿದ್ಯಾರ್ಥಿಗಳಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಾಯಿತು.264 ಮಹಿಳೆ, 390 ಪುರುಷರಿಗೆ ಪಿಎಚ್‍ಡಿ ಪದವಿ ಪ್ರದಾನಿಸಲಾಗಿದೆ. ಒಟ್ಟು 392 ಪದಕ, 198 ಬಹುಮಾನ ನೀಡಲಾಗಿದೆ. 7,971 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ, 20,393 ಅಭ್ಯರ್ಥಿಗಳಿಗೆ ಸ್ನಾತಕ ಪದವಿ ಪ್ರದಾನಿಸಲಾಗಿದೆ.
ಇನ್ಫೋಷಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾ ಮೂರ್ತಿ ಅವರ ಅನುಪಸ್ಥಿತಿಯಲ್ಲಿ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವಕ್ಕೆ ಕ್ರಾಫರ್ಡ್ ಹಾಲ್ ಸಾಕ್ಷಿಯಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಆನ್ ಲೈನ್ ಮೂಲಕ ಘಟಿಕೋತ್ಸವ ಭಾಷಣ ಮಾಡಿದರು. ರಾಜ್ಯಪಾಲ ವಾಜುಬಾಯಿ ವಾಲಾ ಅವರು ಬೆಂಗಳೂರಿನ ರಾಜಭವನದಿಂದ ಲೈವ್ ನಲ್ಲಿ ಪಾಲ್ಗೊಂಡಿದ್ದರು. ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಮೈಸೂರು ವಿವಿ ಕುಲಪತಿ ಪೆÇ್ರ. ಹೇಮಂತ್ ಕುಮಾರ್ ಸೇರಿದಂತೆ ಹಲವು ಗಣ್ಯರು ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.