ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ 6 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮಧ್ಯಾಹ್ನ ಟ್ವೀಟ್ ಮಾಡಿರುವ ಮೋದಿ ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶ ನೀಡುತ್ತೇನೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿ ಈಗ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಈ ವಿಚಾರದ ಬಗ್ಗೆ ಮೋದಿ ಮಾತನಾಡುಡುತ್ತಾರಾ ಎಂಬ ಕುತೂಹಲ ಉಂಟಾಗಿದೆ.
ಹೊಸದಾಗಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುತ್ತಾರಾ ಮೋದಿ ಎಂಬ ಪ್ರಶ್ನೆ ಸಹ ಎದ್ದಿದೆ.