ಮೈಸೂರು: ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ನಗರದ ದೇವರಾಜ ಮಾರುಕಟ್ಟೆಯಲ್ಲಿ ಜನಸಂದಣಿ ತಪ್ಪಿಸಲು ಅ. 23 ರಿಂದ 25 ರವರೆಗೆ ಮಾರುಕಟ್ಟೆಯಲ್ಲಿ ಹೂವಿನ ವ್ಯಾಪಾರದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ಮುಚ್ಚಲು ನಗರಪಾಲಿಕೆ ಆದೇಶಿಸಿದೆ.
ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರಸ್ಥರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಸದರಿ ಮೂರು ದಿನಗಳು ರೈಲ್ವೆ ನಿಲ್ದಾಣದ ಬಳಿಯಿರುವ ಜೆ.ಕೆ.ಮೈದಾನದಲ್ಲಿ ಹೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ನಗರಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ ತಿಳಿಸಿದ್ದಾರೆ.
ಕೋವಿಡ್ ಸೋಂಕು ಹರಡುವ ಹಿನ್ನೆಲೆಯಲ್ಲಿ ನಗರಪಾಲಿಕೆ ಆಯುಕ್ತ ಗುರುದತ್ ಹೆಗಡೆ ಅವರು ದೇವರಾಜ ಮಾರುಕಟ್ಟೆ ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.