ಮೈಸೂರು: ಕೋವಿಡ್-19 ಸೋಂಕಿಗೆ ಲಸಿಕೆ ಇಲ್ಲದ ಕಾರಣ ಜನರು ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಸೋಂಕು ತಗಲದಂತೆ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಅಧ್ಯಕ್ಷ ಎಚ್ ವಿ ರಾಜೀವ್ ತಿಳಿಸಿದರು.
ಕೂರೊನಾ ಜಾಗೃತಿಯ ಭಿತ್ತಿಪತ್ರವನ್ನು ಶುಕ್ರವಾರ ಮುಡಾ ಕಚೇರಿಯಲ್ಲಿ ರಾಜೀವ್ ಬಿಡುಗಡೆಗೊಳಿಸಿ ಮಾತನಾಡಿದರು.
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕೈಗಳನ್ನು ಸೋಪಿನಿಂದ ತೊಳೆಯುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿರುವ ಅರಿವು ಸಂಸ್ಥೆಯ ಕೆಲಸ ಶ್ಲಾಘನೀಯ ಎಂದರು.
ನಮ್ಮ ಕುಟುಂಬ ನಮ್ಮ ಜವಾಬ್ದಾರಿ ಎಂದು ಸಾರ್ವಜನಿಕರೇ ಸ್ವಯಂಪ್ರೇರಿತವಾಗಿ ಜಾಗೃತರಾಗಬೇಕು ಅಕ್ಕಪಕ್ಕದ ಮನೆಯವರಿಗೂ ಜಾಗೃತಿ ಮೂಡಿಸಬೇಕು ಕುಟುಂಬದ ಸದಸ್ಯರನ್ನು ರಕ್ಷಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಹಬ್ಬಗಳ ಸಾಲು ಸಾಲು ಇರುವುದರಿಂದ 10 ಸಾವಿರ ಭಿತ್ತಿಪತ್ರವನ್ನು ಎಲ್ಲ ಪ್ರಮುಖ ರಸ್ತೆಯಲ್ಲಿರುವ ಕಚೇರಿ ಅಂಗಡಿ ಮುಂಗಟ್ಟುಗಳಲ್ಲಿ ಅಂಟಿಸಿ ಕೊರೊನಾ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಅರಿವು ಸಂಸ್ಥೆ ಹಮ್ಮಿಕೊಂಡಿದೆ.
ಜಯಂತ್, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮಾಜಿ ನಗರ ಪಾಲಿಕಾ ಸದಸ್ಯ ಎಂ ಡಿ ಪಾರ್ಥಸಾರಥಿ, ಅರಿವು ಸಂಸ್ಥೆ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಬಿಜೆಪಿ ಮೈಸೂರು ನಗರ ಯುವ ಮೋರ್ಚಾ ಉಪಾಧ್ಯಕ್ಷ ಕಾರ್ತಿಕ್, ನಾಗೇಶ್, ರಾಕೇಶ್ ಕುಂಚಿಟಿಗ, ಕುಮಾರ್, ಯೋಗೇಶ್ ನಾಯ್ಡು ಹಾಗೂ ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.