ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು, ಅ. 28- ಚಾಮುಂಡಿಬೆಟ್ಟದಲ್ಲಿ ರಥೋತ್ಸವವಿರುವ ಹಿನ್ನೆಲೆ ಇಂದು ಸಂಜೆ 6 ಗಂಟೆಯಿಂದ ನಾಳೆ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಚಾಮುಂಡಿಬೆಟ್ಟದಲ್ಲಿ ನಡೆಯಲಿರುವ ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಲ್ಲಿದ್ದು, ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಇಂದು ಸಂಜೆಯಿಂದ ನಾಳೆ ಮಧ್ಯಾಹ್ನ 12 ಗಂಟೆ ವರಗೆ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಮೆಟ್ಟಿಲುಗಳ ಮೂಲಕ ಬೆಟ್ಟ ಹತ್ತುವುದಕ್ಕೂ ಸಾರ್ವಜನಿಕರು ಹಾಗೂ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.
ತುರ್ತು ವಾಹನಗಳು ಹಾಗೂ ಗ್ರಾಮಸ್ಥರ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಾಹನಗಳಿಗೆ ಪ್ರವೇಶಕ್ಕೂ ನಿಷೇಧ ವಿಧಿಸಲಾಗಿದೆ.