ಚಾಮುಂಡೇಶ್ವರಿ ರಥೋತ್ಸವಕ್ಕೆ ಯದುವೀರ್ ರಿಂದ ಚಾಲನೆ

ಮೈಸೂರು, ಅ. 29- ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾತಿ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ಮಹಾರಥೋತ್ಸವ ಗುರುವಾರ ವಿಜೃಂಭಣೆಯಿಂದ ನೆರವೇರಿತು.
ಚಾಮುಂಡಿ ಬೆಟ್ಟದಲ್ಲಿನ ದೇವಿ ಸಲ್ಲನಿಧಿಯಲ್ಲಿ ಬೆಳಿಗ್ಗೆ 9.40 ರಿಂದ 10.05ರೊಳಗಿನ ಧನುರ್ ಲಗ್ನದಲ್ಲಿ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಮುಂಡೇಶ್ವರಿ ದೇವಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಕೋವಿಡ್ ಕಾರಣ ಈ ಬಾರಿ ಅತ್ಯಂತ ಸರಳವಾಗಿ ರಥೋತ್ಸವ ನಡೆಸಲಾಯಿತು.
ದೊಡ್ಡ ರಥದ ಬದಲು ಚಿಕ್ಕ ತೇರಿನಲ್ಲಿ ದೇವಿ ಚಾಮುಂಡೇಶ್ವರಿ ಮೆರವಣಿಗೆ ನಡೆಸಲಾಯಿತು.
ರಥೋತ್ಸವದಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಕೇವಲ 200ಕ್ಕೆ ಸೀಮಿತಗೊಳಿಸಲಾಗಿತ್ತು.
ರಥೋತ್ಸವ ವೇಳೆ ಸಾರ್ವಜನಿಕರ, ಭಕ್ತರ ಪ್ರವೇಶವನ್ನು ಚಾಮುಂಡಿ ಬೆಟ್ಟಕ್ಕೆ ನಿರ್ಬಂಧಿಸಲಾಗಿತ್ತು.
ಶಾಸಕರುಗಳಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ರಥೋತ್ಸವದಲ್ಲಿ ಭಾಗವಹಿಸಿದ್ದರು.