ಬೆಂಗಳೂರು: ವಿದೇಶದಿಂದ ಮಾದಕ ವಸ್ತುಗಳನ್ನು ತರಿಸಿ ಮಾರಾಟ ಮಾಡುತ್ತಿದ್ದ ಟೆಕ್ಕಿಯನ್ನು ನಗರದ ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ.
ನಗರದ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸಾರ್ಥಕ್ ಆರ್ಯ ಬಂಧಿತ ಟೆಕ್ಕಿ.
ಫಾರಿನರ್ಸ್ ಪೆÇೀಸ್ಟ್ ಮೂಲಕ ನಗರಕ್ಕೆ ಡ್ರಗ್ಸ್ ಬಂಧಿತ ಡ್ರಗ್ಸ್ ತರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಲ್ಜಿಯಂನಿಂದ ನಗರಕ್ಕೆ ಬಂದ ಕೊರಿಯರ್ ಬಗ್ಗೆ ಅನುಮಾನಗೊಂಡ ಪೆÇಲೀಸರು ಈ ಕೊರಿಯರ್ ಕುರಿತು ಚಾಮರಾಜಪೇಟೆ ಅಂಚೆ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆ ನಂತರ ಹೆಚ್ಎಸ್ಆರ್ ಲೇಔಟ್ನ ಟೆಕ್ಕಿ ಮನೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ನಡೆಸಿದಾಗ ಟೆಕ್ಕಿ ಮನೆಯಲ್ಲಿ ವಿದೇಶಿ ಮೂಲದ ಮಾದಕವಸ್ತು ಪತ್ತೆಯಾಗಿದೆ.
4.99 ಗ್ರಾಂ ಎಲ್ಎಸ್ಡಿ, ಎಂಎಚ್ ಸೀರಿಸ್ ಪಾಕೆಟ್ ಸ್ಕೇಲ್, ಬ್ರೌನ್ ಸ್ಮೋಕ್ ಪೇಪರ್ ಪಾಕೆಟ್, ಒಸಿಬಿ ಸ್ಲಿಮ್ ಸ್ಮೋಕ್ ಪೇಪರ್ ಪಾಕೆಟ್, ರಾ ಟಿಪ್ಸ್ ಸ್ಮೋಕ್ ಪೇಪರ್ ಪಾಕೆಟ್, 100ಎಂಎಲ್ ಕೆಮಿಕಲ್ ಆಯಿಲ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಹೆಚ್ಎಸ್ಆರ್ ಲೇಔಟ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.