ಸಂಪೂರ್ಣ ಅವಧಿಗೆ ಬಿಎಸ್.ವೈ ಅವರೆ ಸಿಎಂ -ಸಚಿವ ಗೋಪಾಲಯ್ಯ

ಹಾಸನ: ಮುಂದಿನ ಸಂಪೂರ್ಣ ಅವಧಿಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಯಡಿಯೂರಪ್ಪ ಅವರೇ ನಮ್ಮ ನಾಯಕರಾಗಿದ್ದು ಅವರನ್ನು ಬದಲಾವಣೆ ಮಾಡುವ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ; ಆ ಬಗ್ಗೆ ಯಾರಾದರೂ ಮಾತನಾಡುತ್ತಿದ್ದರೆ ಅವರ ಬಗ್ಗೆ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆಂದರು.
ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರು ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ ಅವರು ಆರ್ ಆರ್ ನಗರ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ, ಕೊರೊನಾ ಸಮಯದಲ್ಲಿ ಅಲ್ಲಿ ಮುನಿರತ್ನ ಅವರು ಜನರಿಗೆ ಸ್ಪಂದಿಸಿರುವ ರೀತಿಯಿಂದ ಗೆಲುವು ಸರಾಗವಾಗಲಿದೆ ಎಂದರು.