ಯಾವುದೇ ವೈರಣು ಮನುಷ್ಯನ ವಿರುದ್ಧದ ಹೋರಾಟದಲ್ಲಿ ಜಯ ಸಾಧಿಸಿಲ್ಲ -ಸಚಿವ ಎಸ್.ಟಿ.ಸ್.

ಮೈಸೂರು: ಇತಿಹಾಸಲ್ಲಿ ಯಾವುದೇ ವೈರಣು ಮನುಷ್ಯನ ವಿರುದ್ಧದ ಹೋರಾಟದಲ್ಲಿ ಜಯ ಸಾಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ನಗರದ ಕೋಟೆ ಆಂಜನೇಯ ದೇವಸ್ಥಾನ ಬಳಿ ಭಾನುವಾರ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಇಂತಹ ಸೋಂಕು ಬಂದಾಗಲೆಲ್ಲ ವೈರಾಣು ವಿರುದ್ಧ ಮನುಷ್ಯನೇ ಗೆದಿದ್ದಾನೆ ಎಂದು ಅವರು ಹೇಳಿದರು
ಕೋವಿಡ್ ನಿಯಂತ್ರಣಕ್ಕೆ ಸರಕಾರ ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಪ್ರಕರಣ ಬೇಗ ಪತ್ತೆಯಾದರೆ ಚಿಕಿತ್ಸೆ ನೀಡಿ ಗುಣಪಡಿಸಲು ಸಾಧ್ಯವಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸೋಂಕಿತರು ಪರಿಸ್ಥಿತಿ ತೀವ್ರಗೊಂಡ ನಂತರ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿತ್ತು. ಈ ಸಮಸ್ಯೆಯನ್ನು ಮನಗಂಡ ಸರ್ಕಾರ ಪರೀಕ್ಷೆ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿದೆ ಎಂದರು.
ಕೊರೊನಾ ವಿರುದ್ಧದ ಹೋರಾಟ ಇಲ್ಲಿಗೆ ಮುಗಿದಿಲ್ಲ. ಲಸಿಕೆ ಸಿಗುವ ವರೆಗೂ ಹೋರಾಟ ಮುಂದುವರಿಯಬೇಕು ಎಂದರು.
ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಸ್ವತಃ ಪ್ರಧಾನಮಂತ್ರಿಯವರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆಂದರು.
ಅರಮನೆ ಅವರಣದಲ್ಲಿರುವ ಭುವನೇಶ್ವರಿ ದೇವಾಲಯದಲ್ಲಿ ಸಚಿವ ಸೋಮಶೇಖರ್ ದೇವಿಗೆ ಪೂಜೆ ಸಲ್ಲಿಸಿದರು. ಬಳಿಕ ಭುವನೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗ ರಾಷ್ಟ್ರ ಹಾಗೂ ರಾಜ್ಯಧ್ವಜ ಧ್ವಜಾರೋಹಣ ನೆರವೇರಿಸಿದರು. ಅಶ್ವಾರೋಹಿ ದಳದಿಂದ ಗೌರವ ವಂದನೆಯನ್ನು ಸಚಿವರು ಸ್ವೀಕರಿಸಿದರು.
ಕೋವಿಡ್ ಹಿನ್ನಲೆಯಲ್ಲಿ ಪೆÇಲೀಸ್, ಕಲಾತಂಡಗಳು ಹಾಗೂ ಶಾಲಾ ವಿದ್ಯಾರ್ಥಿಗಳ ಪಥ ಸಂಚಲನ ಇರಲಿಲ್ಲ.
ಇದೇ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಿಂದ ಡಾ. ಗುಬ್ಬಿಗೂಡು ರಮೇಶ್, ಮಾಧ್ಯಮ ಕ್ಷೇತ್ರದಿಂದ ಪಬ್ಲಿಕ್ ಟಿವಿ ವರದಿಗಾರ ಕೆಪಿ ನಾಗರಾಜ್, ಸಮಾಜ ಸೇವೆ ಕ್ಷೇತ್ರದಿಂದ ಶಂಕರ್ ನಾರಾಯಣ್ ಶಾಸ್ತ್ರಿ, ಜಾನಪದ ಕ್ಷೇತ್ರದಿಂದ ಭಾಗ್ಯಮ್ಮ, ಕಲೆ ಮತ್ತು ಸಂಗೀತ ಕ್ಷೇತ್ರದಿಂದ ರೇವಣ್ಣ, ಪರಿಸರ ಕ್ಷೇತ್ರದಿಂದ ನಾಗಭೂಷಣ್ ರಾವ್, ಕನ್ನಡ ಪರ ಹೋರಾಟಗಾರರಾದ ಸಿದ್ದರಾಜು, ಡಿ. ಆರ್ ಕರಿಗೌಡ, ಡಿ ಎಂ ಬಸವಣ್ಣ, ಎಂಬಿ ಮಂಚೇಗೌಡ ಸೇರಿ 11 ಮಂದಿಯನ್ನು ಸಚಿವ ಎಸ್. ಟಿ. ಸೋಮಶೇಖರ್ ಸನ್ಮಾನಿಸಿದರು.
ಶಾಸಕರಾದ ಎಲ್.ನಾಗೇಂದ್ರ, ತನ್ವೀರ್ ಸೇಠ್, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರ ಪೆÇಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಎಸ್ಪಿ ರಿಷ್ಯಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.