ಮಹಿಳೆ ಬ್ಯಾಗ್ ನಲ್ಲಿದ್ದ ನಗ-ನಾಣ್ಯ ದೋಚಿದವನ ಬಂಧನ

ಮೈಸೂರು: ಮಹಿಳೆಯರ ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನು ಕಳುವು ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಲಷ್ಕರ್ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ನಗರದ ತನ್ವೀರ್ ಸೇಠ್ ನಗರದ ವಾಸಿ ಮಹಮ್ಮದ್ ಯೂಸಫ್ ಬಂಧಿತ ಆರೋಪಿ.
ಬಂಧಿತನಿಂದ 7,53,500 ರೂ.ಮೌಲ್ಯದ 160 ಗ್ರಾಂ ಚಿನ್ನಾಭರಣ ಹಾಗೂ 25ಗ್ರಾಂ ಬೆಳ್ಳಿ ಪದಾರ್ಥಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈತ ಅ. 21ರಂದು ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ ನಲ್ಲಿದ್ದ 74 ಗ್ರಾಂ ಚಿನ್ನಾಭರಣ ಮತ್ತು 10 ಸಾವಿರ ರೂ.ನಗದನ್ನು ಅಪಹರಿಸಿದ್ದ. ಈ ಬಗ್ಗೆ ಲಷ್ಕರ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಲಷ್ಕರ್ ಪೆÇಲೀಸರು ಕಾರ್ಯಾಚರಣೆ ನಡೆಸಿ ಕೆಎಸ್ ಆರ್ ಟಿಸಿ ಗ್ರಾಮಾಂತರ ಬಸ್ ನಿಲ್ದಾಣ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಆತ ಮಹಿಳೆಯರು ಗುಂಪಿನಲ್ಲಿದ್ದಾಗ ವ್ಯಾನಿಟಿ ಬ್ಯಾಗ್ ನಲ್ಲಿರುವ ನಗ-ನಾಣ್ಯ ಕಳುವು ಮಾಡಿರುವುದಾಗಿ ತಿಳಿಸಿದ್ದಾನೆ.
ನಗರದ ಅರವಿಂದನಗರದ ಮನೆಯೊಂದರಲ್ಲಿ ಚಿನ್ನ ಮತ್ತು ಬೆಳ್ಳಿ ಪದಾರ್ಥಗಳನ್ನು ಕಳುವು ಮಾಡಿದ್ದಾಗಿ, ಕೇಶವ ಅಯ್ಯಂಗಾರ್ ರಸ್ತೆಯಲ್ಲಿರುವ ಗಗನ್ ರೆಸಿಡೆನ್ಸಿಯಲ್ಲಿ ಕ್ಯಾಶಿಯರ್ ಕುಮಾರ್ ಎಂಬವರ ಮೇಲೆ ಹಲ್ಲೆ ನಡೆಸಿ ಹಣ ಕಿತ್ತುಕೊಳ್ಳಲು ಯತ್ನಿಸಿದ್ದಾಗಿಯೂ ತಿಳಿಸಿದ್ದಾನೆ.
ಈತನ ಬಂಧನದಿಂದ ಲಷ್ಕರ್ ಪೆÇಲೀಸ್ ಠಾಣೆಯಲ್ಲಿ 3 ಹಾಗೂ ಅಶೋಕಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕಳುವು ಪ್ರಕರಣ ಪತ್ತೆಯಾಗಿದೆ.