ಮೈಸೂರು: ಬೆಂಗಳೂರಿನ ಬಿಡಿಎ ಭೂಸ್ವಾಧೀನಾಧಿಕಾರಿ ಬಿ. ಸುಧಾ ಅವರ ಮೈಸೂರಿನಲ್ಲಿರುವ ಸಂಬಂಧಿ ಮನೆ ಮೇಲೆ ಎಸಿಬಿ ಅಧೀಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಸುಧಾ ಮತ್ತು ಬೇನಾಮಿ ಹೆಸರಿನಲ್ಲಿರುವ ಅಪಾರ ಪ್ರಮಾಣದ ಆಸ್ತಿ ಪತ್ರ ಹಾಗೂ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಗರದ ಬೆಮೆಲ್ ಲೇ ಔಟ್ ನಲ್ಲಿ ಸುಧಾ ಅವರ ಸಂಬಂಧಿ ಮನೆ ಇದ್ದು, ಎಸಿಬಿಯ 9 ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿ ಈ ವೇಳೆ ಪ್ರಿಂಟರ್, ಲ್ಯಾಪ್ ಟಾಪ್, ಆಸ್ತಿ ಪತ್ರಗಳು, ಚಿನ್ನಾಭರಣ ಸೇರಿದಂತೆ ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಹಲವು ದಾಖಲಾತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.