ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ, ಮದ್ಯಸೇವನೆಯನ್ನು ನ. 12ರಿಂದ ಕಟ್ಟುನಿಟ್ಟಾಗಿ ನಿಷೇಧ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ್ಸ್ವಾಮಿ ಅವರು ಸೂಚಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಅನಧಿಕೃತ ಮಾರಾಟದ ಬಗ್ಗೆ ಹಲವಾರು ರೀತಿ ದೂರುಗಳು ಬರುತ್ತಿವೆ. ಕಳೆದ ಎಂಟು ತಿಂಗಳಿಂದ ಕೋವಿಡ್ ಹಿನ್ನೆಲೆಯಿಂದಾಗಿ ದಂಡ ವಿಧಿಸುವುದಾಗಲಿ ತಪಾಸಣೆ ತಂಡಗಳು ಭೇಟಿ ನೀಡುವುದು ಕಡಿಮೆಯಾಗಿತ್ತು. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಮದ್ಯಸೇವನೆಯನ್ನು ನಾಳೆಯಿಂದ ಕಟ್ಟುನಿಟ್ಟಾಗಿ ನಿಷೇಧ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ್ಸ್ವಾಮಿ ಅವರು ಸೂಚನೆ ನೀಡಿದರು.
ಪೆÇಲೀಸ್ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ಕೆ.ಎಸ್.ಆರ್.ಟಿ.ಸಿ., ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ನಗರಸಭೆ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಕಚೇರಿ ಆವರಣಗಳಲ್ಲಿ ಧೂಮಪಾನ, ಮದ್ಯಪಾನ ಸೇವನೆ ಮಾಡಿದವರಿಗೆ ನಾಳೆಯಿಂದ ದಂಡ ವಿಧಿಸುವಂತೆ ತಿಳಿಸಿದರು.
ತಂಬಾಕು ಮುಕ್ತ ಮೈಸೂರು ನಗರವನ್ನಾಗಿಸಲು ಮುಖ್ಯವಾಗಿ ಪೆÇಲೀಸ್ ಇಲಾಖೆಯು ಆರೋಗ್ಯ ಇಲಾಖೆಗೆ ಸಂಪೂರ್ಣವಾದ ಸಹಕಾರ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಮಾರಾಟವಾಗುವ ನಿರ್ದಿಷ್ಟ ಆರೋಗ್ಯ ಸೂಚನಾ ಫಲಕಗಳಿಲ್ಲದ ಹಾಗೂ ಕಾಳಸಂತೆಯಲ್ಲಿ ಮಾರಾಟವಾಗುವ ತಂಬಾಕು ಉತ್ಪನ್ನಗಳ ಬಗ್ಗೆ ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಶಿವಪ್ರಸಾದ್ ಮಾತನಾಡಿ, ಚಾಮುಂಡಿಬೆಟ್ಟವನ್ನು ತಂಬಾಕು ಮುಕ್ತವನ್ನಾಗಿಸಲು ಮುಂದಾಗಬೇಕು. ಬೆಟ್ಟಕ್ಕೆ ತಂಬಾಕು, ಮದ್ಯಪಾನ ಹಾಗೂ ಪ್ಲಾಸ್ಟಿಕ್ ತೆಗೆದುಕೊಂಡು ಹೋಗದಂತೆ ಕ್ರಮವಹಿಸಲು, ಬೆಟ್ಟಕ್ಕೆ ಮೆಟ್ಟಿಲು ಮೂಲಕ ಹಾಗೂ ವಾಹನಗಳಲ್ಲಿ ಬರುವವರನ್ನು ಪರೀಶೀಲಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಾದ ಲಕ್ಷ್ಮಿನಾರಾಯಣ, ಸಂತೋಷ್ ಬಿ., ಬಿ.ಇ.ಒ ಮರಿಸ್ವಾಮಿ ಹಾಗೂ ಆರೋಗ್ಯ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಉಪಸ್ಥಿತರಿದ್ದರು.