ಮೈಸೂರು: ಕಾಡಾನೆಯೊಂದು ಮನೆ ಮೇಲೆ ದಾಳಿ ನಡೆಸಿದ ಪರಿಣಾಮ ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಅವರ ಪತ್ನಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ಗುರುವಾರ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದೆ.
ಹೆಚ್.ಡಿ.ಕೋಟೆ ತಾಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿನ ಚಿನ್ನಪ್ಪ ಎಂಬವರ ಮನೆಯ ಮೇಲೆ ಕಾಡಾನೆ ದಾಳಿ ನಡೆಸಿದೆ. ಇದರ ಪರಿಣಾಮ ಕಾಡಾನೆ ದಾಳಿಯಿಂದ ಚಿನ್ನಪ್ಪ (58) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಕೊಟ್ಟೂರಮ್ಮ ಅವರಿಗೆ ಗಂಭೀರ ಗಾಯಗಳಾಗಿದೆ.
ಗಾಯಾಳು ಕೊಟ್ಟೂರಮ್ಮ ಅವರನ್ನು ಹೆಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹೆಚ್.ಡಿ.ಕೋಟೆ ಪೆÇಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.