ಮೈಸೂರು: ಎರಡು ವರ್ಷ ಜೆಡಿಎಸ್ ಶಾಸಕನಾಗಿಯೇ ಅವಧಿ ಪೂರ್ಣಗೊಳಿಸುತ್ತೇನೆ ಎಂದು ಶಾಸಕ ಜಿ. ಟಿ. ದೇವೇಗೌಡ ಹೇಳಿದರು.
ನಗರದಲ್ಲಿ ಸೋಮವಾರ ಜಿಟಿಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನಾನು ಜೆಡಿಎಸ್ ಶಾಸಕನಾಗಿದ್ದೇನೆ. ಪಕ್ಷ ಬಿಡುವ ಮಾತೇ ಇಲ್ಲ ಎಂದು ಅವರು ತಿಳಿಸಿದರು.
ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಶಾಸಕನಾಗಿಯೇ ಉಳಿದ ಎರಡು ಅವಧಿ ಮುಗಿಸುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪರಿಸ್ಥಿತಿ ಹೇಗಿರುತ್ತದೆ ಎಂಬುದನ್ನು ನೋಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಜಿ.ಟಿ.ದೇವೇಗೌಡ ಹೇಳಿದರು.
ಮುಂದಿನ ಚುನಾವಣೆಯ ಹೊತ್ತಿಗೆ ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಹೇಗಿರುತ್ತದೆ ಎನ್ನುವುದನ್ನು ನೋಡುತ್ತೇನೆ. ಕ್ಷೇತ್ರದ ಜನರೊಂದಿಗೆ ಸಮಾಲೋಚನೆ ನಡೆಸಿ ರಾಜಕೀಯ ತೀರ್ಮಾನ ಮಾಡುತ್ತೇನೆಯೇ ಹೊರತು, ಈಗ ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದರು.
ಜನರ ಅಭಿಪ್ರಾಯ ಇಲ್ಲದೆ ಯಾವ ತೀರ್ಮಾನ ಮಾಡಲ್ಲ, ಮಾಡೋದು ಇಲ್ಲ. ಅಂದಿನ ರಾಜಕೀಯ ಸನ್ನಿವೇಶ, ಪರಿಸ್ಥಿತಿ ಹೇಗಿರುತ್ತದೆ ಎನ್ನುವುದನ್ನು ನೋಡಿ ತೀರ್ಮಾನ ಮಾಡುತ್ತೇನೆ ಎಂದು ಜಿಟಿಡಿ ಹೇಳಿದರು.