ನಂಜನಗೂಡು ಶ್ರೀ ಕಂಠೇಶ್ವರಸ್ವಾಮಿ ದರ್ಶನ ಸಮಯ

ಮೈಸೂರು: ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಹೆಚ್ಚು ಜನ ಸೇರುವ ನಿರೀಕ್ಷೆ ಇರುವುದರಿಂದ ಕೋವಿಡ್ ಹಿನ್ನೆಲೆಯಲ್ಲಿ ನಂಜನಗೂಡಿನ ಶ್ರೀ ಕಂಠೇಶ್ವರಸ್ವಾಮಿ ದೇವಸ್ಥಾನಕ್ಕೆ ಸೋಮವಾರ ಬೆಳಿಗ್ಗೆ 6.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶಿಸಿದ್ದಾರೆ.
ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳ ಹಿತದೃಷ್ಟಿಯಿಂದ ಕೋವಿಡ್-19 ಸೋಂಕು ತಡೆಗಟ್ಟುವ ಸಂಬಂಧ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿ, 1 ಗಂಟೆಯ ನಂತರ ದೇವಾಲಯದಲ್ಲಿ ಜರುಗುವ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಒಳ ಆವರಣದಲ್ಲಿ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ಎಂದಿನಂತೆ ನಡೆಸಬಹುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.