ಕೊಡಗು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ನಾಯಕರು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಹೇಳಿದರು.
ನಗರದಲ್ಲಿ ಭಾನುವಾರ ಎಸ್.ಟಿ.ಎಸ್. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿಯವರು ನುಡಿದಂತೆ ನಡೆಯುವವರು ಅವರು ಮಾತು ಕೊಟ್ಟಂತೆ ನಮ್ಮೆಲ್ಲರನ್ನು ಸಚಿವರನ್ನಾಗಿ ಮಾಡಿದ್ದಾರೆ. ಅಲ್ಲದೆ ಸೋತವರಿಗೂ ಕೂಡ ಮಂತ್ರಿಗಿರಿ ಕೊಟ್ಟಿದ್ದಾರೆ. ಇನ್ನೂ ಸಂಪುಟ ವಿಸ್ತರಣೆಯಾಗಲಿ, ಪುನರಾಚನೆಯಾಗಲೀ ಆಗಿಲ್ಲ. ಅದನ್ನು ಮಾಡುವ ಸಮಯದಲ್ಲಿ ಯಾರಿಗೆ ಸ್ಥಾನ ಕೊಡಬೇಕು? ಕೊಡಬಾರದು? ಎಂಬ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆಂದರು.
ಈಗಲೂ ಸಹ ಅವರು ಉಳಿದವರನ್ನು ಕೈಬಿಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ಎಸ್.ಟಿ.ಎಸ್. ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆ ಸೇರಿದಂತೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪಕ್ಷವನ್ನು ಬಲಪಡಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಸಚಿವರು ತಿಳಿಸಿದರು.