ರೌಡಿಗಳಿಗೆ ಖಡಕ್ ಎಚ್ಚರಿಕೆ

ಮೈಸೂರು: ರೌಡಿಗಳಿಗೆ ಪೊಲೀಸರು ಖಡಕ್ ಎಚ್ಚಕೆ ನೀಡಿದ್ದಾರೆ.
ನರಸಿಂಹರಾಜ ವಿಭಾಗದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ ಸಂಬಂಧ ಮಂಗಳವಾರ ರೌಡಿ ಪರೇಡ್ ನಡೆಸಿ, ರೌಡಿಗಳು ಯಾವುದೇ ರೀತಿಯ ಅಕ್ರಮ ರಿಯಲ್ ಎಸ್ಟೇಟ್ ದಂಧೆಯಲ್ಲಿ ಭಾಗವಹಿಸುವುದು, ಸಾರ್ವಜನಿಕರಿಗೆ ಕಿರುಕುಳ ನೀಡುವುದು ಸೇರಿದಂತೆ ಇನ್ನಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅತ್ಯಂತ ಕಠಿಣ ಕ್ರಮ ಜರುಗಿಸಲಾಗುವುದೆಂದು ಎ.ಸಿ.ಪಿ ಶಿವಶಂಕರ್ ಹಾಗೂ ಮೇಟಗಳ್ಳಿ ಪೊಲೀಸ್ ಇನ್ಸ್‍ಪೆಕ್ಟರ್ ಎ.ಮಲ್ಲೇಶ್ ರವರು ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಗಳ ಮೇಲೆ ಕಣ್ಗಾವಲಿರಿಸಿದ್ದು, ರೌಡಿಗಳು ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತ ಡಾ. ಎ.ಎನ್ ಪ್ರಕಾಶ್‍ಗೌಡ ತಿಳಿಸಿದ್ದಾರೆ.