ಮೈಸೂರು: ಪಂಚಲಿಂಗ ದರ್ಶನಕ್ಕೆ ಎಲ್ಲಾ ಸಿದ್ಧತೆ ಆಗುತ್ತಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಸಚಿವ ಎಸ್.ಟಿ.ಸೋಮಶೇಖರ್ ಅವರು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 64ನೇ ಪರಿನಿರ್ವಾಣ ದಿನದ ಅಂಗವಾಗಿ ಭಾನುವಾರ ಪುರಭವನ ಆವರಣದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ ನಂತರ ಮಾಧ್ಯಮ ಪ್ರತಿನಿದೀಗಳೊಂದಿಗೆ ಮಾತನಾಡಿದರು.
ಪಂಚಲಿಂಗ ದರ್ಶನಕ್ಕೆ ಎಲ್ಲಾ ಸಿದ್ಧತೆ ಆಗುತ್ತಿದೆ. ಖ. 10ರಿಂದ 19ರ ವರೆಗೆ ನಡೆಯಲಿದೆ. ಡಿ. 14ರಂದು ವಿಶೇಷ ಕಾರ್ಯಕ್ರಮ ಇರುತ್ತದೆ. ಖ. 13ರ ರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಂದು ವಾಸ್ತವ್ಯ ಮಾಡಿ, ಡಿ. 14ರ ಮುಂಜಾನೆ ಪಂಚಲಿಂಗ ದರ್ಶನದ ವಿಶೇಷ ಪೂಜೆಯಲ್ಲಿ ಭಾಗವಹಿಸುವರು ಎಂದು ಎಸ್ ಟಿಎಸ್ ತಿಳಿಸಿದರು.
ದಸರಾದಲ್ಲಿ 7.8 ಕೋಟಿ ರೂ. ಅನುದಾನ ಉಳಿದಿದೆ. ಆ ಅನುದಾನದಲ್ಲಿ ಪಂಚಲಿಂಗ ದರ್ಶನಕ್ಕೆ ಬೇಕಾಗುವಷ್ಟು ಅನುದಾನವನ್ನು ಬಳಸಿಕೊಳ್ಳಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆಂದರು.
ಕೋವಿಡ್ ಹಿನ್ನೆಲೆಯಲ್ಲಿ ಸಲಹೆ ನೀಡುವಂತೆ ಪರಿಣಿತರ ಸಮಿತಿಗೆ ಕೇಳಿದ್ದೆವು. ಅವರು ವರದಿ ಕೊಟ್ಟಿದ್ದಾರೆ. ಪ್ರತಿ ದಿನ 1000 ಜನರಿಗೆ ಹಾಗೂ ಡಿಸೆಂಬರ್ 14 ರಂದು 1500 ಜನರಿಗೆ ಅವಕಾಶ ನೀಡುವಂತೆ ಸಲಹೆ ನೀಡಿದ್ದಾರೆ. ಅದರಂತೆ ಆಚರಿಸಲಾಗುತ್ತದೆ. ಎಂದರು.
ತಲಕಾಡಿನ ಜನರು ಹಾಗೂ ಆ ತಾಲ್ಲೂಕಿನ ಜನರಿಗೆ ಮಾತ್ರ ಅವಕಾಶ ನೀಡಿ, ಹೊರಗಿನವರಿಗೆ ಅವಕಾಶ ನೀಡದಂತೆ ಪರಿಣಿತರ ಸಮಿತಿ ಸಲಹೆ ಮಾಡಿದೆ ಎಂದರು.
ಅಂಬೇಡ್ಕರ್ ಅವರು ತಮ್ಮ ಬಾಲ್ಯದಲ್ಲಿ ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯ ಅನುಭವಿಸಿದ್ದರು. ಅದರ ಆಧಾರದ ಮೇಲೆ ಸಂವಿಧಾನ ರಚಿಸಿದರು. ಸಂವಿಧಾನದಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ ಎಂದು ಹೇಳಿದರು.
ಮೈಸೂರಿನಲ್ಲಿ ಸ್ಥಗಿತಗೊಂಡಿರುವ ಡಾ. ಅಂಬೇಡ್ಕರ್ ಭವನ ಕಾಮಗಾರಿ ಮುಂದುವರಿಸಲು ಹೆಚ್ಚುವರಿ 16 ಕೋಟಿ ರೂ. ಅನುದಾನ ಬೇಕಾಗಿದೆ ಎಂದು ಅಂದಾಜು ತಯಾರಿಸಲಾಗಿದೆ. ಕ್ಯಾಬಿನೆಟ್‍ನಲ್ಲಿ ಇಟ್ಟು ಅನುಮೋದನೆ ಮಾಡಿಸಲಾಗುವುದು ಎಂದರು.
ಹಿಂದೆ 20 ಕೋಟಿ ರೂ. ಮಂಜೂರಾಗಿತ್ತು. ಅಷ್ಟು ಕೆಲಸ ಆಗಿದೆ. ಭಾರತದಲ್ಲೇ ಎರಡನೇ ಅತಿದೊಡ್ಡ ಅಂಬೇಡ್ಕರ್ ಭವನ ಇದಾಗಬೇಕು ಎಂದು ಶ್ರೀನಿವಾಸ್ ಪ್ರಸಾದ್ ಅವರು ಈ ಭವನವನ್ನು ಹೆಚ್ಚು ವಿಸ್ತಾರ ಮಾಡುವಂತೆ ಸಲಹೆ ಮಾಡಿದ್ದಾರೆ. ಅದರಂತೆ ಮಾಡಲು ಹೆಚ್ಚುವರಿ ವೆಚ್ಚ ಆಗುತ್ತಿದೆ ಎಂದರು.
ಬೌದ್ಧ ಧಮ್ಮ ಗುರುಗಳು ಬುದ್ಧವಂದನೆ ಧಮ್ಮವಂದನೆ ಸಂಘವಂದನೆ ಸಲ್ಲಿಸಿದರು. ಬುದ್ಧರ ಪಂಚಶೀಲ ತತ್ವಗಳನ್ನು ಬೋಧಿಸಿದರು. ಉಸ್ತುವಾರಿ ಸಚಿವರು ಹಾಗೂ ಉಪಸ್ಥಿತರಿದ್ದ ಎಲ್ಲಾ ಗಣ್ಯರು ಬೌದ್ಧ ತತ್ವಗಳನ್ನು ಆಲಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಮರಿತಿಬ್ಬೇಗೌಡ, ಆರ್. ಧರ್ಮಸೇನ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್. ನಾಗೇಂದ್ರ, ಹರ್ಷವರ್ಧನ್, ಮೇಯರ್ ತಸ್ನಿಂ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪೆÇಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.