ಮೈಸೂರು: ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲೂಕಿನ ಸೋಸಲೆ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ರಾಜು (19) ಎಂದು ಗುರುತಿಸಲಾಗಿದೆ.
ಅಪಘಾತದ ತೀವ್ರತೆಗೆ ರಾಜು ತಲೆ ಛಿದ್ರವಾಗಿದೆ. ಹಿಂಬದಿಯಲ್ಲಿ ಕುಳಿತಿದ್ದ ತರುಣ್ ಗೆ ತೀವ್ರ ಗಾಯವಾದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗೆ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಿ. ನರಸೀಪುರ ಪೆÇಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.