ಲಜ್ಜೆಗೆಟ್ಟ ಸರಕಾರ ಆಡಳಿತ ನಡೆಸುತ್ತಿದೆ -ಶಾಸಕ ಪ್ರಿಯಾಂಕ್ ಖರ್ಗೆ

ಯಾದಗಿರಿ: ಲಜ್ಜೆಗೆಟ್ಟ ಸರಕಾರ ಆಡಳಿತ ನಡೆಸುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಯಾದಗಿರಿಯ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ್ ನಾಯಕ ಪದಗ್ರಹಣ ಸಮಾರಂಭ ಉದ್ಘಾಟಿಸಿ ಪ್ರಿಯಾಂಕ್ ಖರ್ಗೆ ಮಾತನಾಡಿದರು.
ಈಗಿನ ಕೇಂದ್ರ ಮತ್ತು ರಾಜ್ಯ ಸರಕಾರ ಎಷ್ಟು ಲಜ್ಜಗೆಟ್ಟಿದೆ ಎಂದರೆ ಕೊರೊನಾ ಹೆಣದ ಮೇಲೆ ಹಣ ಮಾಡಿ ಲೂಟಿ ಮಾಡಿದರು ಎಂದು ಪ್ರಿಯಾಂಕ್ ಖರ್ಗೆ ಕೇಮದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು.
ರಾತ್ರೋ ರಾತ್ರೋ ಟಿವಿ ಪರದೆ ಮೇಲೆ ಬರುವ ಮೋದಿಯನ್ನು ಕಂಡರೆ ಜನರು ಗಾಬರಿಯಾಗುವಂತಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಲ್ಲಿ ನೆಲೆಸಿದ್ದ ಈ ಭಾಗದ ಕೂಲಿ ಕಾರ್ಮಿಕರನ್ನು ವಾಪಸ್ ಕರೆತರಲು ಅವರಿಂದ ಎರಡು ಪಟ್ಟು ದುಡ್ಡು ವಸೂಲಿ ಮಾಡಿದರು ಎಮದು ಟೀಕಿಸಿದರು.