ಚುನಾವಣಾ ಕರ್ತವ್ಯಕ್ಕೆ ಗೈರಾದ 41 ಮತಗಟ್ಟೆ ಅಧಿಕಾರಿಗಳಿಗೆ ಡಿಸಿ ನೋಟಿಸ್

ಚಾಮರಾಜನಗರ: ಮೊದಲನೇ ಹಂತದ ಗ್ರಾಮ ಪಂಚಾಯತ್ ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಒಟ್ಟು 41 ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಮೊದಲನೆ ಹಂತದಲ್ಲಿ ಚುನಾವಣಾ ಸಂಬಂಧ ನೇಮಕವಾಗಿದ್ದವರ ಪೈಕಿ 41 ಮತಗಟ್ಟೆ ಅಧಿಕಾರಿಗಳು ಗೈರು ಹಾಜರಾಗಿದ್ದ ಹಿನ್ನಲೆಯಲ್ಲಿ ಕಾರಣ ಕೇಳಿ ನೋಟಿಸ್ ಜಾರಿಮಾಡಿರುವ ಜಿಲ್ಲಾಧಿಕಾರಿಯವರು ನೋಟಿಸ್ ತಲುಪಿದ 24 ಗಂಟೆಯೊಳಗೆ ವಿವರಣೆ ನೀಡುವಂತೆ ಸೂಚಿಸಿದ್ದಾರೆ.
ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡು ಗೈರುಹಾಜರಾದ ಓರ್ವ ಮತಗಟ್ಟೆ ಅಧಿಕಾರಿ, ಮೂವರು ಸಹಾಯಕ ಮತಗಟ್ಟೆಗೆ ಅಧಿಕಾರಿ ಹಾಗೂ 22 ಪೆÇೀಲಿಂಗ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡು ಗೈರು ಹಾಜರಾದ ಮೂವರು ಮತಗಟ್ಟೆ ಅಧಿಕಾರಿ, ನಾಲ್ವರು ಸಹಾಯಕ ಮತಗಟ್ಟೆಗೆ ಅಧಿಕಾರಿ ಹಾಗೂ 8 ಪೆÇೀಲಿಂಗ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.