ಮೈಸೂರು: ಮಾಜಿ ಪ್ರಧಾನ ಮಂತ್ರಿ ಅಜಾತಶತ್ರು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಜೀವಧಾರ ರಕ್ತನಿಧಿ ಕೇಂದ್ರದ ವತಿಯಿಂದ ಮೈಸೂರು ಮೃಗಾಲಯದಲ್ಲಿ 10 ಸಾವಿರ ರೂ. ನೀಡಿ ಚಿಂಪಾಂಜಿಯನ್ನು ದತ್ತು ತೆಗೆದುಕೊಳ್ಳುವ ಮೂಲಕ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮೃಗಾಲಯದ ಆವರಣದಲ್ಲಿ ಪ್ರವಾಸಿಗರಿಗೆ ರಕ್ತದಾನ ಜಾಗೃತಿ ಕರಪತ್ರ ವಿತರಿಸಿ ಜಾಗೃತಿ ಮೂಡಿಸಲಾಯಿತು.
ನಂತರ ಮೃಗಾಲಯ ಪ್ರಾಧಿಕಾರ ಅಧ್ಯಕ್ಷರಾದ ಎಲ್ ಆರ್ ಮಹಾದೇವಸ್ವಾಮಿ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಾಣಿಗಳ ಪ್ರಿಯರು ಹಾಗೆಯೇ ಪ್ರತಿಯೊಬ್ಬರೂ ಅವರವರ ಜನ್ಮ ದಿನಾಚರಣೆಯನ್ನು ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಜನ್ಮ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಬೇಕೆಂದು ಮನವಿ ಮಾಡಿದರು
ಭಾರತೀಯ ಜನತಾ ಪಾರ್ಟಿ ಮೈಸೂರು ನಗರ ಘಟಕದ ಅಧ್ಯಕ್ಷ ಟಿ ಎಸ್ ಶ್ರೀವತ್ಸ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿರವರು ಮೂರು ಬಾರಿ ನಮ್ಮ ದೇಶದ ಪ್ರಧಾನ ಮಂತ್ರಿಗಳಾಗಿ ತಮ್ಮದೇ ಆದ ಅಭೂತಪೂರ್ವ ಸೇವೆ ಸಲ್ಲಿಸಿದ್ದಾರೆ. ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಗೋಕುಲ್ ಗೋವರ್ಧನ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಲಕ್ಷ್ಮೀದೇವಿ, ಮೃಗಾಲಯದ ಅಧಿಕಾರಿ ರಘು, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮಾಜಿ ನಗರ ಪಾಲಿಕೆ ಸದಸ್ಯ ಎಂ ಡಿ ಪಾರ್ಥಸಾರಥಿ, ಯುವ ಮುಖಂಡ ವಿಕ್ರಂ ಅಯ್ಯಂಗಾರ್, ಜಿ ಎಂ ಪಂಚಾಕ್ಷರಿ, ಸಿಂಡಿಕೇಟ್ ಜಗದೀಶ್, ಹರೀಶ್ ನಾಯ್ಡು ಹಾಗೂ ಇನ್ನಿತರರು ಹಾಜರಿದ್ದರು.