ಮುಂಜಾಗೃತಾ ಕ್ರಮಗಳೊಂದಿಗೆ ಶಾಲೆ ಪುನಾರಂಭಕ್ಕೆ ಸಿದ್ಧತೆ -ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಸರ್ಕಾರಿ, ಅನುದಾನ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 6 ರಿಂದ 9 ತರಗತಿ ವರೆಗೆ ವಿದ್ಯಾಗಮ ಪುನಾರಂಭ ಮತ್ತು 10ನೇ ತರಗತಿಯನ್ನು ಜನವರಿ 1ರಿಂದ ಪ್ರಾರಂಭಿಸಲು ಮೈಸೂರು ಜಿಲ್ಲಾಡಳಿತ ಎಲ್ಲಾ ಕ್ರಮ ಕೈಗೊಂಡಿದ್ದು, ಆತಂಕ ಬೇಡ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ 6 ರಿಂದ 10 ನೇ ತರಗತಿವರೆಗೆ ಒಟ್ಟು 2290 ಶಾಲೆಗಳಿದ್ದು, 208605 ವಿದ್ಯಾರ್ಥಿಗಳು ದಾಖಲಾಗಿದ್ದು 20088 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. 6 ರಿಂದ 8ನೇ ತರಗತಿ ವರೆಗೆ 1576 ಶಾಲೆಗಳಿದ್ದು, 168495 ಮಕ್ಕಳು, 11893 ಶಿಕ್ಷಕರು ಇದ್ದಾರೆ. 9 ರಿಂದ 10ನೇ ತರಗತಿ 714 ಶಾಲೆಗಳಿದ್ದು, 40110 ಮಕ್ಕಳು, 8195 ಶಿಕ್ಷಕರು ಇದ್ದಾರೆ.
ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಹಾಗೂ ನಗರ ಪ್ರದೇಶಗಳಲ್ಲಿ ನಗರಪಾಲಿಕೆ/ ನಗರ ಸಭೆ/ಪುರಸಭೆ ವತಿಯಿಂದ ಶಾಲೆಯ ಸುತ್ತಮುತ್ತಲಿನ ಪ್ರದೇಶ(200 ಮೀ ವ್ಯಾಪ್ತಿ), ಶಾಲಾವರಣ ಮತ್ತು ಶಾಲಾ ಶೌಚಾಲಯದ ನೈರ್ಮಲ್ಯ ಹಾಗೂ ಶಾಲೆಗಳ ಸ್ಯಾನಿಟೈಸೇಷನ್ ಕಾರ್ಯ ಮಾಡಲು ಸೂಚಿಸಲಾಗಿದೆ.
ಹಾಗೆಯೇ ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್‍ಗೆ ಅಗತ್ಯವಿರುವ ಥರ್ಮಲ್ ಸ್ಕ್ಯಾನರ್ ಗಳ ವ್ಯವಸ್ಥೆಯನ್ನು ಮಾಡಿಕೊಡಲು ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ.
ಪ್ರತಿ ಶಾಲೆಯಲ್ಲಿ ಐಸೋಲೇಷನ್ ಕೋಣೆಯ ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಲಾಗಿದೆ. ಪ್ರತಿ ದಿನ ಶಿಕ್ಷಕರು ಶಾಲೆಯಲ್ಲಿ ಮಕ್ಕಳನ್ನು ಅವಲೋಕಿಸಿ ಕೋವಿಡ್-19 ಲಕ್ಷಣ ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಆಸ್ಪತ್ರೆ/ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಸೂಚಿಸಲು ತಿಳಿಸಲಾಗಿದೆ.
ಸರ್ಕಾರದ ನಿರ್ದೇಶನದಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಬಿಸಿಯೂಟದ ಬದಲು ಆಹಾರ ಧಾನ್ಯಗಳನ್ನು ವಿತರಿಸುತ್ತಿರುವುದನ್ನು ಮುಂದುವರೆಸಲು ತಿಳಿಸಲಾಗಿದೆ.
ಶಾಲೆಯ ಹಂತದಲ್ಲಿ ಎಲ್ಲಾ ರೀತಿಯ ಪೂರ್ವಸಿದ್ಧತೆಯನ್ನು ಮಾಡಿಕೊಂಡಿರುವುದರಿಂದ ಪೆÇೀಷಕರು ಮಕ್ಕಳನ್ನು ನಿರ್ಭಯವಾಗಿ ಶಾಲೆಗೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಕೋರಿದ್ದಾರೆ.