ಕೇರಳದಲ್ಲಿ ಹಕ್ಕಿ ಜ್ವರ: ಕೋಳಿ ಸಾಕಾಣಿಕೆಗೆ ನಿರ್ಬಂಧ

ಮೈಸೂರು: ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಭಾಗದಲ್ಲಿ ಬರುವ ಹೆಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್‍ಪೆÇೀಸ್ಟ್‍ನಿಂದ ಕೋಳಿ ಮತ್ತು ಇತರೆ ಪಕ್ಷಿಗಳ ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದ್ದಾರೆ.
ಕೇರಳದಿಂದ ಬಾವಲಿ ಚೆಕ್ ಪೆÇೀಸ್ಟ್ ಮೂಲಕ ಬರುವ ವಾಹನಗಳನ್ನು ಸ್ಯಾನಿಟೈಜ್ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಟ್ಟೆಚ್ಚರ ವಹಿಸಿದ್ದಾರೆಂದು ಅವರು ತಿಳಿಸಿದ್ದಾರೆ.
ಕೋಳಿಗಳು, ಹಿತ್ತಲಕೋಳಿಗಳು, ಹಕ್ಕಿಗಳು, ಕಾಡುಹಕ್ಕಿಗಳು, ವಲಸೆ ಹಕ್ಕಿಗಳು ಯಾವುದೇ ಹಕ್ಕಿಗಳಲ್ಲಿ ಅಸ್ವಾಭಾವಿಕ ರೋಗ ಲಕ್ಷಣಗಳು ಕಂಡುಬಂದಲ್ಲಿ ಅಥವಾ ಅಸ್ವಾಭಾವಿಕ ಮರಣ ಸಂಭವಿಸಿದಲ್ಲಿ ಕೂಡಲೆ ಪಾಶುಪಾಲನ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕಾರಿಗಳು ತೀವ್ರ ನಿಗಾವಹಿಸಿ ಹಕ್ಕಿ ಜ್ವರ ಸಂಭವನೀಯತೆಯನ್ನು ಪರಿಗಣಿಸಿ ಸಂಬಂಧ ಪಟ್ಟ ಪ್ರಯೋಗಾಲಯಕ್ಕೆ ರೋಗ ವಿಶ್ಲೇಷಣೆ ನಡೆಸುವ ಬಗ್ಗೆ ಕ್ರಮ ವಹಿಸಲು ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಜೀವಂತ ಕೋಳಿ/ಮಾಂಸ ಮಾರಾಟ ಕೇಂದ್ರಗಳು ಮತ್ತು ಕೋಳಿ ಸಾಗಾಣಿಕೆ ವಾಹನಗಳ ಚಲನ ವಲನದ ಬಗ್ಗೆ ನಿಗಾ ವಹಿಸಲು ಹಾಗೂ ಸಂದರ್ಭಾನುಸಾರ ಸೂಕ್ತ ಕ್ರಮ ವಹಿಸಿ ಮಾಹಿತಿ ನೀಡಲು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.