ಗಡಿಜಿಲ್ಲೆ ಚಾಮರಾಜನಗರ ಅಭಿವೃದ್ಧಿಗೆ ಒತ್ತು ನೀಡುತ್ತೇವೆ -ಸಚಿವ ಜಗದೀಶ್ ಶೆಟ್ಟರ್

ಮೈಸೂರು: ಗಡಿಜಿಲ್ಲೆ ಚಾಮರಾಜನಗರ ಅಭಿವೃದ್ಧಿಗೆ ಒತ್ತು ನೀಡುತ್ತೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ನಗರದಲ್ಲಿ ಗುರುವಾರ ಸಚಿವ ಜಗದೀಶ್ ಶೆಟ್ಟರ್ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಚಾಮರಾಜನಗರ ಜಿಲ್ಲೆ ಹಿಂದುಳಿದಿರುವ ಜಿಲ್ಲೆ. ಗಡಿಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುತ್ತೇವೆ. ಇಲ್ಲಿಯೂ ಕೈಗಾರಿಕೋದ್ಯಮಕ್ಕೆ ಹೆಚ್ಚು ಒತ್ತು ನೀಡುವ ಹಿನ್ನೆಲೆ ಇಂದು ಭೇಟಿ ನೀಡುತ್ತಿದ್ದೇನೆಂದು ಶೆಟ್ಟರ್ ತಿಳಿಸಿದರು.
ಚಾಮರಾಜನಗರದಲ್ಲಿ ಕೈಗಾರಿಕಾ ಬೆಳವಣಿಗೆಗೆ ಒಳ್ಳೆಯ ಅವಕಾಶ ಇದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಚಾಮರಾಜನಗರದಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ನೆರೆ ರಾಜ್ಯ ಕೇರಳದ ಉದ್ಯಮಿಗಳು ಅಗಮಿಸುತ್ತಿದ್ದಾರೆ. ಗಡಿಜಿಲ್ಲೆಯ ಕೈಗಾರಿಕೋದ್ಯಮ ರಾಜ್ಯದ ಕೈಗಾರಿಕೋದ್ಯಮ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.
ಈ ನಿಟ್ಟಿನಲ್ಲಿ ಚಾಮರಾಜನಗರ ಜಿಲ್ಲೆಯ ಅಧಿಕಾರಿಗಳು, ಉದ್ಯಮಿಗಳ ಜೊತೆ ಸಂವಾದ ನಡೆಸುತ್ತೇನೆ ಎಂದು ಅವರು ಹೇಳಿದರು.
ಕೋವಿಡ್ ಲಾಕ್ ಡೌನ್ ನಂತರ ಅತಿ ಹೆಚ್ಚು ಉದ್ಯೋಗ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಸಚಿವ ಶಟ್ಟರ್ ಹೇಳಿದರು.
ದೇಶದಲ್ಲಿ ಮೂರುವರೆ ಲಕ್ಷ ಕೋಟಿಯಷ್ಟು ಬಂಡವಾಳ ಹೂಡಿಕೆ ಮಾಡಲು ಕೈಗಾರಿಕೋದ್ಯಮಿಗಳು ಮುಂದಾಗಿದ್ದಾರೆ. ರಾಜ್ಯದಲ್ಲಿ 1.40 ಕೋಟಿ ಬಂಡವಾಳ ಹೂಡಲು ಕೈಗಾರಿಕೆಗಳು ಮುಂದಾಗಿವೆ ಎಂದು ಸಚಿವರು ತಿಳಿಸಿದರು.
ಕೋವಿಡ್ ವೇಳೆಯಲ್ಲಿ ಅವರ ಗ್ರಾಮಗಳಿಗೆ ತೆರಳಿದ ನೌಕರರು ಪುನಃ ಹಿಂದಿರುಗಿ ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಉದ್ಯೋಗ ಸೃಷ್ಟಿಸಲು ಕೊಪ್ಪಳದಲ್ಲಿ ಟಾಯ್ಸ್ ಕ್ಲಸ್ಟರ್ ಮುಖಾಂತರ 350ರಿಂದ 450 ಎಕರೆ ಪ್ರದೇಶದಲ್ಲಿ ವಿನೂತನ ಗೊಂಬೆಗಳ ತಯಾರಿಕೆಗೆ ಮುಂದಾಗಿದ್ದೇವೆ. ಇದರಿಂದ 20 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುತ್ತೇವೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ದೇಶದಲ್ಲಿ ಅತಿ ಹೆಚ್ಚು ವಿದೇಶಿ ಬಂಡವಾಳ ಹೂಡಿಕೆದಾರರು ಆಗಮಿಸುತ್ತಿದ್ದಾರೆ. ಇದರಿಂದ ಮತ್ತಷ್ಟು ಹೆಚ್ಚಿನ ಉದ್ಯೋಗಗಳು ರಾಜ್ಯದ ನಿರುದ್ಯೋಗಿಗಳಿಗೆ ಸಿಗಲಿದೆ ಎಂದು ಅಚರು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವರ ಜೊತೆ ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಸೇರಿದಂತೆ ಇನ್ನಿತರ ಬಿಜೆಪಿ ಮುಖಂಡರಿದ್ದರು.